ಬೆಂಗಳೂರು: ಫೆ-22;ಇಂದು ನಡೆಯುತ್ತಿರುವ ವಿಧಾನ ಮಂಡಲು ಅಧಿವೇಶನದಲ್ಲಿ ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿ ಮಾಡುವ ಬಗ್ಗೆ CM ರವರು ಮಾತನಾಡಿ ಅವರು ಬೀದಿಗಿಳಿದು ಹೋರಾಟ ಮಾಡಲು ಅವಕಾಶ ಮಾಡಿಕೊಡಬಾರದೆಂದು ಬಿ.ಜೆ.ಪಿ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಸಿ.ಎಂ ಬೊಮ್ಮಯಿ ರವರ ಬಳಿ ತುಂಬಿದ ಅಧಿವೇಶನದಲ್ಲಿ ಬಹಿರಂಗವಾಗಿ ಮನವಿ ಮಾಡಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳು ಮಂಡಿಸಿದ್ದ ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್ನಲ್ಲಿ 7ನೇ ವೇತನ ಆಯೋಗದ ಜಾರಿ ಮತ್ತು ನೂತನ ಪಿಂಚಣಿ ಯೋಜನೆಯ ಬಗ್ಗೆ ಯಾವುದೇ ಪ್ರಸ್ತಾವ ಮಾಡದಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರಿ ನೌಕರರ ಸಂಘವು ಮಂಗಳವಾರ (ಫೆ 21) ರಂದು ತುರ್ತು ಸಭೆಯನ್ನು ನಡೆಸಿ 1.ಏಳನೇ ವೇತನ ಆಯೋಗದ ಮದ್ಯಂತರ ವರದಿ ಪಡೆದು 40% ಫಿಟ್ಮೆಂಟ್ ನ್ನು ದಿನಾಂಕ 1.07.2022 ರಿಂದ ಜಾರಿಗೆ ತರುವುದು. 2.ರಾಜಸ್ತಾನ,ಛತ್ತೀಸಗಡ, ಜಾರ್ಖಂಡ್, ಪಂಜಾಬ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತಂದಿರುವಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಎನ್ ಪಿ ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು. ಈ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಏಳು ದಿನಗಳ ನೋಟಿಸ್ ನೀಡಿ ಬೇಡಿಕೆ ಈಡೇರಿಸದಿದ್ದರೆ ದಿನಾಂಕ:01.03.2023 ರಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರರು, ನಿಗಮ ಮತ್ತು ಮಂಡಳಿಗಳು ಅನುದಾನಿತ ಸಂಸ್ಥೆಯ ಎಲ್ಲ ನೌಕರರು ಅನಿರ್ದಿಷ್ಟಾವಧಿಯವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವುದಾಗಿ ಘೋಷಣೆ ಮಾಡಿತ್ತು.
ಈ ಬಗ್ಗೆ ಗಮನ ನೀಡಿರುವ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಇಂದು ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡತ್ತು CM ರವರು ಸಧನದಲ್ಲಿ ಉತ್ತರಿಸುವ ವೇಳೆ ಸರ್ಕಾರಿ ನೌಕರರ ಬೇಡಿಕೆಯಾಗಿರುವ 7ನೇ ವೇತನ ಆಯೋಗವನ್ನು ಜಾರಿ ಮಾಡುತ್ತೇವೆಂದು ಹೇಳಿ ನೌಕರರು ಬೀದಿಗಿಳಿದು ಹೋರಟ ಮಾಡಲು ಅವಕಾಶ ಮಾಡಿಕೊಡಬಾರದೆಂದು ಸೂಚಿಸಿ. 7ನೇ ವೇತನ ಆಯೋಗವನ್ನು ಜಾರಿ ಮಾಡುವಂತೆ ಮನವಿ ಮಾಡಿದ್ದಾರೆ.