ಬೆಂಗಳೂರು;ನಂದಿನಿ ಹಾಲಿನ ದರ ಆಗಸ್ಟ್ 1ರಿಂದ 3 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ.ಆಗಸ್ಟ್ 1 ರಿಂದ ಹಾಲಿನ ದರ ಏರಿಕೆ ಅನ್ವಯವಾಗಲಿದೆ ಎಂದು ಪಶುಸಂಗೋಪನೆ ಸಚಿವ ವೆಂಕಟೇಶ್ ತಿಳಿಸಿದ್ದಾರೆ.ಗ್ರಾಹಕರಿಂದ ನೇರವಾಗಿ ರೈತರಿಗೆ ತಲುಪಿಸುತ್ತೇವೆ.ಹಾಲು ಉತ್ಪಾದಕರ ಬೇಡಿಕೆಗಳನ್ನು ಪರಿಗಣಿಸಿ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.ಹಾಲಿನ ಉತ್ಪಾದನೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಲಿನ ದರ ಏರಿಕೆ ಮಾಡಿದ್ದೇವೆ,ಈ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, KMF ನಿರ್ದೇಶಕ ಹೆಚ್.ಡಿ.ರೇವಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಲೂರು ಶಾಸಕ ನಂಜೇಗೌಡರು ಮತ್ತಿತರರು ಭಾಗವಹಿಸಿದ್ದರು.