Revenue Facts

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ  ಸಚಿವ ಸಂಪುಟ ಸಭೆ

ಬೆಂಗಳೂರು; ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿನ ಬರಗಾಲ ನಿರ್ವಹಣೆ ಕುರಿತು ಚರ್ಚೆ ನಡೆಯಲಿದೆ. ಜಿಲ್ಲೆಗಳ ಪ್ರವಾಸ ಮಾಡಿ ಬರದ ಬಗ್ಗೆ ನಿಗವಹಿಸಿ ಎಂದು ಸಚಿವರಿಗೆ ಸಿಎಂ ಸೂಚನೆ ನೀಡಲಿದ್ದಾರೆ. ಬರದ ವಿಚಾರದಲ್ಲಿ ನಿರ್ಲಕ್ಷ ಆಗಬಾರದು,ಸಭೆಯಲ್ಲಿ ಹಿಂದುಳಿದ ವರ್ಗದ ಮೀಸಲಾತಿ ಸಂಬಂಧ, ಜಾತಿ ಗಣತಿ , ಕಾವೇರಿ ನದಿ ವಿವಾದ ಸೇರಿ ಹಲವು ಮಹತ್ವದ ವಿಚಾರಗಳು,ವಿಶೇಷ ಅಧಿವೇಶನವೂ ಸೇರಿದಂತೆ ಚಳಿಗಾಲದ ಅಧಿವೇಶನದ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ. ಜೊತೆಗೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಚಿವರು ಸೇರಿದಂತೆ ಸ್ವಪಕ್ಷೀಯರ ಜಾತಿಗಣತಿ ವರದಿ ಜಾರಿಗೆ ಒತ್ತಡ ತರುತ್ತಿರುವ ಹಿನ್ನೆಲೆಯಲ್ಲಿ ಅದರ ಸ್ವೀಕಾರದ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂತ್ರಿ ಮಂಡಲದ ಸಚಿವರು, ಶಾಸಕರು, ಸರ್ಕಾರದ ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಕೂಡ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

Exit mobile version