ಬೆಂಗಳೂರು: ಫೆ-21;7ನೇ ವೇತನ ಆಯೋಗದ ವರದಿ ಜಾರಿ ಹಾಗೂ ಎನ್.ಪಿ.ಎಸ್ ರದ್ದು ಮಾಡಲು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಂಗಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ದಿನಾಂಕ:-01.03.2023 ರಿಂದ ಅನಿರ್ಧಿಷ್ಟಾವಧಿಯವರೆಗೆ ಕರ್ತವ್ಯಕ್ಕೆ ಗೈರಾಜರಾಗುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ರವರು ಕರೆಕೊಟ್ಟಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿಯವರು ಮಂಡಿಸಿದ್ದ ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್ನಲ್ಲಿ 7ನೇ ವೇತನ ಆಯೋಗದ ಜಾರಿ ಮತ್ತು ನೂತನ ಪಿಂಚಣಿ ಯೋಜನೆಯ ಬಗ್ಗೆ ಯಾವುದೇ ಪ್ರಸ್ತಾವ ಮಾಡದಿರುವ ಹಿನ್ನೆಲೆಯಲ್ಲಿ, ಈ ಬಗ್ಗೆ ಚರ್ಚಿಸಿ ಮುಂದಿನ ನಡೆ ಕೈಗೊಳ್ಳಲು ರಾಜ್ಯ ಸರ್ಕಾರಿ ನೌಕರರ ಸಂಘವು ಫೆಬ್ರವರ 21 ರಂದು ತಮ್ಮ ಕಚೇರಿಯ ಬಳಿ “ತುರ್ತು ರಾಜ್ಯ ಕಾರ್ಯಕಾರಿಣಿ ಚುನಾಯಿತ ಪದಾಧಿಕಾರಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರ ಸಭೆ”ಯನ್ನು ಹಮ್ಮಿಕೊಂಡಿದ್ದು ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ರವರು 7ನೇ ವೇತನ ಆಯೋಗದ ವರದಿ ಜಾರಿ ಹಾಗೂ ಎನ್.ಪಿ.ಎಸ್ ರದ್ದು ಮಾಡುವ ಸಂಬಂಧ ಒತ್ತಡ ಏರಲು ದಿನಾಂಕ:-01.03.2023 ರ ಬುಧವಾರ ದಿಂದ ಅನಿರ್ಧಿಷ್ಟಾವಧಿಯವರೆಗೆ ಕರ್ತವ್ಯಕ್ಕೆ ಗೈರಾಜರಾಗುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ರವರು ಕರೆಕೊಟ್ಟಿದ್ದಾರೆ.