26.4 C
Bengaluru
Wednesday, December 4, 2024

ಕಾವೇರಿ ಬಿಕ್ಕಟ್ಟು ಚರ್ಚೆ;ದೆಹಲಿಯಲ್ಲಿ ಇಂದು ಸಿಎಂ ಮಹತ್ವದ ಸಭೆ

#Cauvery #crisis #discussion #meeting #CM #dehali

ಬೆಂಗಳೂರು;ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಸೇರಿ ರಾಜ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಬಂದಿಳಿದಿದ್ದಾರೆ. ಇಂದು ಬೆಳಿಗ್ಗೆ 10 ಗಂಟೆಯ ಬಳಿಕ ರಾಜ್ಯದ ಸಂಸದರು & ಕೇಂದ್ರ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ. 15 ದಿನಗಳ ಕಾಲ ದಿನಾಲೂ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWMA ಮತ್ತೆ ನಿರ್ದೇಶನ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಕಾನೂನು ತಜ್ಞರ ಜತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಸಭೆ ನಡೆಸಲಿದ್ದಾರೆ.

ಕೇಂದ್ರ ಸರ್ಕಾರದ ಮುಂದೆ ಬಾಕಿಯಿರುವ ಬಿಜೆಪಿ ರಾಜ್ಯದ ಯೋಜನೆಗಳು ಹಾಗೂ ಬರಪರಿಹಾರ ರಾಜ್ಯ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ದೆಹಲಿಯ ಮುಂದೆ ತಾಜ್ ಮಾನ್ ಸಿಂಗ್ ಹೋಟೆಲ್‌ನಲ್ಲಿ ಇಂದು ಬೆಳಗ್ಗೆ ಸಾಕಷ್ಟು ಮಹತ್ವದ ಸಭೆಯಲ್ಲಿ ಪಾಲ್ಗೊಳಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ರಾತ್ರಿ ದೆಹಲಿಗೆ ತೆರಳಿದ್ದಾರೆ. ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರು (Union Ministers), ಲೋಕಸಭಾ ಸದಸ್ಯರು (Lok Sabha Members) ಹಾಗೂ ರಾಜ್ಯಸಭಾ ಸದಸ್ಯರು (Rajya Sabha Members) ಈ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ‌‌.ಕೆ. ಶಿವಕುಮಾರ್, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ, ಕಾನೂನು ಸಚಿವ ಎಚ್.ಕೆ. ಪಾಟೀಲ್‌, ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಭಾಗಿಯಾಗಲಿದ್ದಾರೆ..ರಾಜ್ಯಸರಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು ಎಂದು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸರಕಾರಕ್ಕೆ ಸಲಹೆ ಮಾಡಿವೆ. ರಾಜ್ಯ ಸರಕಾರ ಮಧ್ಯರಾತ್ರಿಯೇ ಸುಪ್ರಿಂಕೋರ್ಟ್ ಮುಂದೆ ಮೇಲ್ಮನವಿ ಸಲ್ಲಿಸಬೇಕಿತ್ತು. ಈಗಾಗಲೇ ಸಾಕಷ್ಟು ತಡವಾಗಿದ್ದು, ಸರಕಾರದ ಉದಾಸೀನ ಭಾವನೆಯಿಂದ ರಾಜ್ಯದ ರೈತರಿಗೆ ಅನ್ಯಾಯವಾಗಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ

Related News

spot_img

Revenue Alerts

spot_img

News

spot_img