Revenue Facts

ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್,ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ 1,030 ಕ್ಯೂಸೆಕ್‌ ನೀರು ಹರಿಸಲು ಆದೇಶ

ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್,ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ 1,030 ಕ್ಯೂಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು;ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ಎದುರಾಗಿದೆ. ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರೆಗೆ ಮತ್ತೆ 1,030 ಕ್ಯೂಸೆಕ್‌ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೂಚನೆ ನೀಡಿದೆ. ತಮಿಳುನಾಡಿಗೆ ನೀರು ಬಿಟ್ಟು ಬಸವಳಿದಿರುವ ರಾಜ್ಯ ಸರ್ಕಾರಕ್ಕೆ ಈ ಮೂಲಕ CWRT ಮತ್ತೊಂದು ಬರೆ ಇಟ್ಟಿದೆ,ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಈ ಸೂಚನೆ ನೀಡಿದ್ದು, ತಮಿಳುನಾಡಿಗೆ ಡಿಸೆಂಬರ್ ಅಂತ್ಯದವರಿಗೆ 1,030 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಿದೆ.ಮುಂದೆ ಬರುವ ಬೇಸಿಗೆಗೆ ಜಲಾಶಯಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆಗಳಿವೆ. ಇಷ್ಟಾದರೂ ಸಹ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಹೇಳಿದ್ದು, ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.ಇದೀಗ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿದ್ದು, ಡಿಸೆಂಬರ್ ಕೊನೆವರೆಗೂ ತಮಿಳುನಾಡಿಗೆ ನೀರು ಹರಿಸುವಂತೆ (ಕಾವೇರಿ ನೀರು ನಿಯಂತ್ರಣ ಸಮಿತಿ) CWRC ಸೂಚನೆ ನೀಡಿದೆ.

Exit mobile version