Revenue Facts

ಕಾವೇರಿ ನೀರು ಹಂಚಿಕೆ:ಸೆ.1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಕಾವೇರಿ ನೀರು ಹಂಚಿಕೆ:ಸೆ.1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

#Cauvery #water #distribution #Supreme Court #September 1
ನವದೆಹಲಿ : ಕಾವೇರಿ ನೀರು ಹಂಚಿಕೆ ವಿಚಾರ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಶುಕ್ರವಾರ ಮಹತ್ವದ ವಿಚಾರಣೆ ನಡೆಯಿತು.ತಮಿಳುನಾಡು ಮತ್ತು ಕರ್ನಾಟಕ ಎರಡೂ ರಾಜ್ಯಗಳ ವಾದವನ್ನು ಆಲಿಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ, ಸೆಪ್ಟೆಂಬರ್ 1ಕ್ಕೆ ವಿಚಾರಣೆಯನ್ನು ಮುಂದೂಡಿದೆ.ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಸದ್ಯಕ್ಕೆ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.ಈ ಮೂಲಕ ಸದ್ಯ ವಿವಾದ ಬಗೆಹರಿಸುವುದನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಬಿಟ್ಟಿದೆ. ಸುಪ್ರೀಂ ಕೋರ್ಟ್ ತೀರ್ಮಾನದಿಂದ ತಮಿಳುನಾಡಿಗೆ ನಿರಾಸೆಯಾಗಿದೆ.ಮುಂದಿನ ಸೋಮವಾರ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯ ತೀರ್ಮಾನ ತುಂಬಾನೇ ಮಹತ್ವ ಪಡೆದುಕೊಂಡಿದೆ.

ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯು ಮುಂದಿನ ಸೋಮವಾರ ನಡೆಯಲಿದೆ. ಮುಂದಿನ 15 ದಿನಗಳ ತನಕ ನೀರು ಹಂಚಿಕೆ ಬಗ್ಗೆ ಈ ಸಭೆಯಲ್ಲಿ ಪರಿಶೀಲಿಸಿ ಸೂಕ್ತ ಆದೇಶವನ್ನು ಆ ಸಮಿತಿ ನೀಡಲಿದೆ. ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆ ಆಗಿದೆಯೇ? ಇಲ್ಲವೇ? ಎಂಬುವುದನ್ನು ಗಮನಿಸಲಿದೆ. ಪ್ರಾಧಿಕಾರ ನೀಡಿದ್ದ ಆದೇಶ ರಾಜ್ಯದ ಹಿತಾಸಕ್ತಿಗೆ ವಿರುದ್ಧ ಎಂದು ಕರ್ನಾಟಕ ಹೇಳಿದೆ. ಈ ವಾದವನ್ನು ತಮಿಳುನಾಡು ವಿರೋಧಿಸಿದ್ದು ನೀರಿನ ಪ್ರಮಾಣ ಹೆಚ್ಚಬೇಕು ಎಂದು ಹೇಳಿದೆ. ಹೀಗಾಗಿ ಮುಂದಿನ ಶುಕ್ರವಾರ ನಾವು ಮತ್ತೆ ವಿಚಾರಣೆ ಮಾಡುತ್ತೇವೆ ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ,ಸಾಮಾನ್ಯ ಮಳೆ ವರ್ಷಕ್ಕೆ ನಿಗದಿಪಡಿಸಿದ ನೀರು ಬಿಡುಗಡೆಯ ಪ್ರಕಾರ, ಜೂನ್​ನಲ್ಲಿ 9.19 ಟಿಎಂಸಿ, ಜುಲೈನಲ್ಲಿ 31.24 ಟಿಎಂಸಿ, ಆಗಸ್ಟ್​ನಲ್ಲಿ 45.95 ಟಿಎಂಸಿ, ಸೆಪ್ಟೆಂಬರ್​ನಲ್ಲಿ 36.76 ಟಿಎಂಸಿ, ಅಕ್ಟೋಬರ್​ನಲ್ಲಿ 20.22 ಟಿಎಂಸಿ, ನವೆಂಬರ್​ನಲ್ಲಿ 13.78 ಟಿಎಂಸಿ, ಡಿಸೆಂಬರ್​​ನಲ್ಲಿ 7.35 ಟಿಎಂಸಿ, ಜನವರಿಯಲ್ಲಿ 2.76 ಟಿಎಂಸಿ ಹಾಗೂ ಫೆಬ್ರವರಿಯಲ್ಲಿ 2.5 ಟಿಎಂಸಿ ಸೇರಿ ಮೇ ತಿಂಗಳವರೆಗೆ ಒಟ್ಟು 177.25 ಟಿಎಂಸಿ ನೀರನ್ನು ಬಿಡುಗಡೆ ಮಾಡುವ ಬಾಧ್ಯತೆ ಹೊಂದಿಲ್ಲ. ಇದಕ್ಕಾಗಿ ತಮಿಳುನಾಡು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕರ್ನಾಟಕ ಸರ್ಕಾರ ವಿವರಿಸಿದೆ.

Exit mobile version