ಮಂಡ್ಯ;ಕಾವೇರಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ವಾಸ್ತವ ಪರಿಸ್ಥಿತಿಯನ್ನು ತಾವು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವರಿಗೆ ವಿವರಿಸಿರುವುದಾಗಿ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿವಯರು ಮಧ್ಯಪ್ರವೇಶ ಮಾಡಬೇಕು ಎಂಬುದು ರಾಜ್ಯ ಸರ್ಕಾರದ ಅಸಹಾಯಕತೆಯ ವಾದ,ಕಾವೇರಿ ನದಿ ನೀರಿನ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂಬ ತಮಿಳುನಾಡು ಸರ್ಕಾರದ ನಿರ್ಣಯ ಸರಿ ಅಲ್ಲ .ಏಕೆಂದರೆ ಸುಪ್ರೀಂ ಕೋರ್ಟ್ ಕೂಡ ಮಧ್ಯಪ್ರವೇಶ ಮಾಡಲ್ಲ ಎಂದಿರುವಾಗ CWMA ನಿರ್ಧಾರವೇ ಅಂತಿಮವಾಗಿದೆ.ತಮಿಳುನಾಡು ಮೊದಲಿನಿಂದಲೂ ಕಾವೇರಿ ನೀರಿನ ವಿಚಾರದಲ್ಲಿ ಒತ್ತಡ ಹೇರುತ್ತಿದೆ. ಕರ್ನಾಟಕ ಸರ್ಕಾರ ಇದರಲ್ಲಿ ವಿಫಲವಾಗಿದೆ.ಇಡೀ ದೇಶಕ್ಕೆ ಪ್ರಧಾನಮಂತ್ರಿ. ಒಂದು ರಾಜ್ಯದ ಪರವಾಗಿ ಮಾತನಾಡಲು ಸಾಧ್ಯವಿಲ್ಲ. ಇಂಡಿಯಾ ಒಕ್ಕೂಟ ಮಾಡಿಕೊಂಡಿದ್ದಾರೆ, ಮಾತನಾಡಿ ಬಗೆಹರಿಸಬಹುದು.ಮುಖ್ಯಮಂತ್ರಿಗಳು ಒಂದು ಜಿಲ್ಲೆ ಪರ ಮಾತನಾಡಲು ಸಾಧ್ಯವಿಲ್ಲ.