ಬೆಂಗಳೂರು;ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು 553 ಹೋಟೆಲ್, ಬಾರ್ ಆಯಂಡ್ ರೆಸ್ಟೋರೆಂಟ್(Bar and Restorent) ಗಳ ಮೇಲೆ ದಾಳಿ ನಡೆಸಿದೆ. 131 ಹೊಟೇಲ್, – ರೆಸ್ಟೋರೆಂಟ್‌ಗಳು ನಿಯಮಗಳನ್ನು ಉಲ್ಲಂಘಿಸಿ ವ್ಯವಹಾರ ನಡೆಸುತ್ತಿರುವುದು ಪತ್ತೆಯಾಗಿದ್ದು, ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿವೆ.553 ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿದ ಸಿಸಿಬಿ(CCB) ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.ನಿಯಮ ಉಲ್ಲಂಘಿಸಿದ ಹೋಟೆಲ್, ರೆಸ್ಟೋರೆಂಟ್, ಬಾರ್‌ಗಳ ವಿರುದ್ಧ ಕೋಟ್ನಾ, ಜೆಜೆ ಆಯಕ್ಟ್(JJ act) ಅಡಿ 2, 300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದೆ.