22.4 C
Bengaluru
Friday, November 22, 2024

ಮೀಟರ್ ಬಡ್ಡಿದಂಧೆ ವ್ಯವಹಾರ ನಡೆಸುತ್ತಿದ್ದವರ ಮೇಲೆ ಸಿಸಿಬಿ ದಾಳಿ

ಬೆಂಗಳೂರು;ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ(CCB) ದಾಳಿ ನಡೆಸಿದ್ದು, ನಗದು, ಚಿನ್ನಾಭರಣ ಸಹಿತ ಹಲವು ವಸ್ತುಗಳನ್ನು ಮುಟ್ಟುಗೋಲು ಮಾಡಿ ಕೊಂಡು ಮನಿ ಲಾಂಡರಿಂಗ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.ಬೆಂಗಳೂರಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮೀಟರ್ ಬಡ್ಡಿ ನಡೆಸುತ್ತಿದ್ದ ನಾಲ್ಕು ಕಡೆ ಸಿಸಿಬಿ(CCB) ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಾಮರಾಜಪೇಟೆ, ಬಸವೇಶ್ವರನಗರ, ಸಿಟಿ ಮಾರ್ಕೆಟ್ನಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಎಎಸ್ಐ ಮಗಳಾದ ಶೀಲಾ ಎನ್ನುವವರ ಮನೆ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಜಗದೀಶ್ ಅಲಿಯಾಸ್ ಟಾಮಿ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಮೀಟರ್ ಬಡ್ಡಿ ನಡೆಸುತ್ತಿದ್ದ ಅವರಿಗೆ ಸಿಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.ಬಸವೇಶ್ವರ ನಗರದಲ್ಲೂ ದಾಳಿ ನಡೆಸಲಾಗಿದೆ.ದಾಳಿ ವೇಳೆ 23,42,400 ನಗದು, 7,00,000 ಮೌಲ್ಯದ 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, 109 ಚೆಕ್​ಗಳು, 50 ಅನ್ ಡಿಮಾಂಡ್ ಪ್ರಾಮಿಸರಿ ನೋಟ್, 42 ಖಾಲಿ ಬಾಂಡ್ ಪೇಪರ್, 85 ಶುದ್ದ ಕ್ರಯ ಪ್ರತ್ರಗಳು, 35 ಸಾಲ ನಮೂದಿಸಿದ ದಾಖಲಾತಿ, 11 ಈ ಸ್ಪಾಂಪ್ ಪೇಪರ್​ಗಳು, 45 ಪಾಕೆಟ್ ಪುಸ್ತಕ, 15 ಅಗ್ರಿಮೆಂಟ್ ಪ್ರತಿಗಳು, 6 ರೋಲೆಕ್ಸ್ ವಾಚ್​ಗಳನ್ನು ವಶಕ್ಕೆ ಪಡೆದಿದ್ದಾರೆ.ಹಣದ ಅವಶ್ಯಕತೆ ಇರುವ ಜನರಿಗೆ ಬಡ್ಡಿಗೆ ಎಂದು ಹಣ ನೀಡಿ ಬಳಿಕ ಮೀಟರ್ ಲೆಕ್ಕದಲ್ಲಿ ಹಿಂಸೆ ನೀಡಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರು ಕೇಳಿಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮನಿ ಲಾಂಡರಿಂಗ್ (Money landring act)ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿದೆ.

Related News

spot_img

Revenue Alerts

spot_img

News

spot_img