ಬೆಂಗಳೂರು:ನಗರದಲ್ಲಿ ಅಕ್ರಮವಾಗಿ ಪಟಾಕಿ ಸಂಗ್ರಹಿಸಿದ್ದಂತ ಗೋದಾಮಿನ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಲಕ್ಷಾಂತರ ಮೌಲ್ಯದ ಪಟಾಕಿಯನ್ನು ಜಪ್ತಿ ಮಾಡಿರೋ ಘಟನೆ ನಡೆದಿದೆ,ನ್ಯೂ ತಿಪ್ಪಸಂದ್ರ ಮುಖ್ಯರಸ್ತೆ ಹಾಗೂ ಜ್ಞಾನಭಾರತಿ ಬಳಿ ಅಕ್ರಮವಾಗಿ ಪಟಾಕಿ ಸಂಗ್ರಹಿಸಿದ್ದ ಗೋದಾಮುಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಅನುಮತಿ ಪಡೆಯದೇ ಪಟಾಕಿಯನ್ನು ಅಕ್ರಮವಾಗಿ ಸಾಗಿಸಲಾಗಿತ್ತು,ಜೀವನ್ ಭೀಮಾನಗರ ಠಾಣೆಯ ವ್ಯಾಪ್ತಿಯಲ್ಲಿನ ನ್ಯೂ ತಿಪ್ಪಸಂದ್ರ ಮುಖ್ಯ ರಸ್ತೆಯ ಗೋದಾಮಿನಲ್ಲಿ 25 ಲಕ್ಷ ಮೌಲ್ಯದ ಪಟಾಕಿಯನ್ನು ಜಪ್ತಿ ಮಾಡಿದ್ದಾರೆ.ಇನ್ನೂ ಜ್ಞಾನಭಾರತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಗೋದಾಮಿನ ಮೇಲೂ ದಾಳಿ ಮಾಡಿ, ಸಂಬಂಧ ಪಟ್ಟ ಪ್ರಾಧಿಕಾರದಿಂದ ಯಾವುದೇ ಅನುಮತಿಪಡೆಯಲೇ ಸಂಗ್ರಹಿಸಿದ್ದಂತ 15 ಲಕ್ಷ ಮೌಲ್ಯದ ಪಟಾಕಿ ಜಪ್ತಿ ಮಾಡಿದ್ದಾರೆ,ಎರಡೂ ಗೋದಾಮು ಮಾಲೀಕರ ವಿರುದ್ಧ ಎಫ್ ಐಆರ್ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.