#Ceremonial #launch #Grilahakshmi #Yojana #Mysore
ಬೆಂಗಳೂರು;ಗೃಹ ಲಕ್ಷ್ಮಿ ಯೋಜನೆಯು ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ,ಗೃಹಲಕ್ಷ್ಮಿ ಯೋಜನೆ’ ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ಮಾಸಿಕ ರೂ. 2000/- ಹಣ ವಿತರಣೆ ಮಾಡಲಾಗುತ್ತದೆ.ರೇಷನ್ ಕಾರ್ಡ್‌ನಲ್ಲಿ ನಮೂದಿಸಿರುವ ಮನೆಯ ಯಜಮಾನಿಯನ್ನೇ ಯೋಜನೆಯ ಫಲಾನುಭವಿ ಎಂದು ಪರಿಗಣಿಸಲಾಗುತ್ತದೆ.ಮಹಾರಾಜ ಕಾಲೇಜು ಮೈದಾನದಲ್ಲಿ ಅರಮನೆ ಮಾದರಿಯಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು ಲಕ್ಷಾಂತರ ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ರಾಜ್ಯಸರ್ಕಾರ ಫಲಾನುಭವಿಗಳಿಗೂ ಏಕಕಾಲಕ್ಕೆ ಹಣ ಖಾತೆಗೆ ಜಮೆಯಾಗುವಂತೆ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಕಾಠ್ಯಕ್ರಮದ ಪ್ರಮುಖರ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಇದಕ್ಕಾಗಿ ಬೃಹತ್ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ.ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಬೆಳಗ್ಗೆ 11.30ಕ್ಕೆ ಕಾಠ್ಯಕ್ರಮ ಉದ್ಘಾಟಿಸುವರು, ರಾಹುಲ್‌ಗಾಂಧಿ, ರಣದೀಪ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ನಾಲ್ಕು ನೊ ಶಿವಕುಮಾರ್, ಸಚಿವರು, ಪ್ರಮುಖ ಅಧಿಕಾರಿ ವರ್ಗದವರು ಭಾಗಿಯಾಗುವರು.
ರಾಜ್ಯ ಸರ್ಕಾರ ಮಹತ್ವದ ಯೋಜನೆಯಾದ ಗೃಹ ಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಇಂದು ಚಾಲನೆ ನೀಡಲಾಗುತ್ತದೆ. ಬೆಳಗ್ಗೆ 11.30ಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಬಟನ್ ಒತ್ತುವ ಮೂಲಕ, ಯೋಜನೆಗೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಸರ್ಕಾರ ತಿಳಿಸಿರುವಂತೆ ಮೈಸೂರಿನಲ್ಲಿ ಬಟನ್ ಒತ್ತುವ ಮೂಲಕ ಚಾಲನೆ ನೀಡುತ್ತಿದ್ದಂತೆ, ನಿಮ್ಮ ಖಾತೆಗೆ 2,000 ಜಮೆ ಆಗಲಿದೆ. ಅಂದರೆ, ಬೆಳಗ್ಗೆ 11.30ಕ್ಕೆ ಗೃಹ ಲಕ್ಷ್ಮೀ ಯೋಜನೆಯ ಮೊದಲ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ ಎನ್ನಲಾಗಿದೆ.ಇಂದು ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದೆ. ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ ‘ಗೃಹಲಕ್ಷ್ಮಿ’ ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ ಮಾಡಲಿದ್ದಾರೆ. ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ. ಇದೊಂದು ಐತಿಹಾಸಿಕ ದಿನ ಎಂದು ತಿಳಿಸಿದ್ದಾರೆ.