24.2 C
Bengaluru
Monday, July 22, 2024

ಚಂದ್ರಯಾನ-3 ಲ್ಯಾಂಡಿಂಗ್ ಸ್ಥಳಕ್ಕೆ ‘ಶಿವಶಕ್ತಿ’, ಚಂದ್ರಯಾನ-2 ಪತನ ಸ್ಥಳಕ್ಕೆ ‘ತಿರಂಗಾ’ವೆಂದು ನಾಮಕರಣ

#Chandrayaan-3 #Landing Site #Shiva Shakti #Tiranga
ಬೆಂಗಳೂರು;ಚಂದ್ರಯಾನ -3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ'(Shivashakti) ಎಂದು ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ತಿರಂಗಾ(Tiranga) ಎಂಬುದಾಗಿ ನಾಮಕರಣ ಮಾಡಲಾಗುತ್ತದೆ ಎಂದು ಪ್ರಧಾನಿ ಮೋದಿ ಘೋಷಿಸಿದರು.ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-3(Chandrayana) ರ ಲ್ಯಾಂಡಿಂಗ್ ಸೈಟ್ ಅನ್ನು “ಶಿವಶಕ್ತಿ ಪಾಯಿಂಟ್” ಎಂದು ಹೆಸರಿಸಿದ್ದಾರೆ ಮತ್ತು ಚಂದ್ರಯಾನ -2 ರ ಕ್ರ್ಯಾಶ್ ಸೈಟ್ ಅನ್ನು ತಿರಂಗಾ ಪಾಯಿಂಟ್ ಎಂದು ಹೆಸರಿಸಿದ್ದಾರೆ. ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ (ISTRAC) ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಈ ಘೋಷಣೆ ಮಾಡಿದರು.ಇಸ್ರೋ ವಿಜ್ಞಾನಿಗಳ ಭವ್ಯ ಸಾಧನೆಯನ್ನು ಶ್ಲಾಘಿಸಿದರು.ಚಂದ್ರಯಾನ-3 ಮಿಷನ್‌ನ ಯಶಸ್ಸನ್ನು ಭಾರತದ ಭಾರತದ ಬಾಹ್ಯಾಕಾಶ ಕಾರ್ಯಕ್ರಮದ ಇತಿಹಾಸದಲ್ಲಿ ಅಸಾಧಾರಣ ಕ್ಷಣ ಎಂದು ಬಣ್ಣಿಸಿದ ಅವರು, 2019 ರಲ್ಲಿ ಚಂದ್ರಯಾನ-2 ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಕ್ರ್ಯಾಶ್-ಲ್ಯಾಂಡ್ ಆಗುವ ಸ್ಥಳವನ್ನು ತಿರಂಗಾ ಪಾಯಿಂಟ್ ಎಂದು ಕರೆಯಲಾಗುತ್ತದೆ.

ಚಂದ್ರಯಾನ-3 ಮಿಷನ್‌ನಲ್ಲಿ ಭಾಗಿಯಾಗಿರುವ ವಿಜ್ಞಾನಿಗಳ ತಂಡದೊಂದಿಗೆ ಸಂವಾದ ನಡೆಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಭಾವುಕರಾದರು.ಭಾರತವು ಚಂದ್ರನ ಮೇಲಿದೆ. ನಮ್ಮ ರಾಷ್ಟ್ರೀಯ ಹೆಮ್ಮೆಯನ್ನು ನಾವು ಚಂದ್ರನ ಮೇಲೆ ಇರಿಸಿದ್ದೇವೆ ಎಂದು ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕಮಾಂಡ್ ಸೆಂಟರ್‌ನಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ ಭಾವುಕತೆಯಿಂದ ನುಡಿದರು.ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದರು.ಹಿಮಾಲಯದಿಂದ ಕನ್ಯಾಕುಮಾರಿ ವರೆಗೂ ಜೋಡಿಸುವ ಸಾಮರ್ಥ್ಯ ಇದೆ. ಶಿವನಲ್ಲಿ ಮಾನವನ ಅಭಿವೃದ್ಧಿ ಇದೆ. ಚಂದ್ರಯಾನ-3 ರ ಯಶಸ್ಸಿನಿಂದಾಗಿ ಮೇಕ್ ಇನ್ ಇಂಡಿಯಾ(Make in india)ದ ಮೇಲೆ ಬಲವಾದ ನಂಬಿಕೆ ಮೂಡುತ್ತಿದೆ ಎಂದು ಮೋದಿ ಹೇಳಿದರು.

Related News

spot_img

Revenue Alerts

spot_img

News

spot_img