Revenue Facts

ಚಂದ್ರಯಾನ್-3 ಯಶಸ್ವಿ: ಇಸ್ರೋ ಘೋಷಣೆ

ಚಂದ್ರಯಾನ್-3 ಯಶಸ್ವಿ: ಇಸ್ರೋ ಘೋಷಣೆ

ನವದೆಹಲಿ;ಭಾರತದ ಮೂರನೇ ಚಂದ್ರನ ಅನ್ವೇಷಣಾ ಕಾರ್ಯಾಚರಣೆಯಾದ ಚಂದ್ರಯಾನ -3 ಉಡಾವಣೆ ಇಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದಿಂದ ಯಶಸ್ವಿಯಾಗಿ ನೆರವೇರಿದೆ.ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್‌ಎಲ್‌ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ.ಗಗನನೌಕೆಯು ಭೂಮಿಯಿಂದ ಚಂದ್ರನೆಡೆಗೆ ತಲುಪಲು ಸುಮಾರು 40 ದಿನ ತೆಗೆದುಕೊಳ್ಳುತ್ತದೆ. ಆಗಸ್ಟ್ 23 ರಂದು ಚಂದ್ರನಲ್ಲಿ ಇಳಿಯಲಿದೆ ಎಂದು ನಿರೀಕ್ಷಿಸಲಾಗಿದೆ. ಲ್ಯಾಂಡಿಂಗ್ ನಂತರ ಇದು ಒಂದು ಚಂದ್ರನ ದಿನಕ್ಕೆ ಕಾರ್ಯನಿರ್ವಹಿಸುತ್ತದೆ. ಅಂದರೆ ಸರಿಸುಮಾರು 14 ಭೂಮಿಯ ದಿನಗಳು. ಚಂದ್ರನ ಮೇಲಿನ ಒಂದು ದಿನವು ಭೂಮಿಯ ಮೇಲಿನ 14 ದಿನಗಳಿಗೆ ಸಮಾನವಾಗಿರುತ್ತದೆ. ಈ ಕಾರ್ಯಾಚರಣೆಯು ಯಶಸ್ವಿಯಾದರೆ, ರಷ್ಯಾ, ಯುನೈಟೆಡ್ ಸ್ಟೇಟ್ಸ್ ಮತ್ತು ಚೀನಾದ ನಂತರ ಚಂದ್ರನ ಮೇಲೆ ನಿಯಂತ್ರಿತ ಲ್ಯಾಂಡಿಂಗ್ ಸಾಧಿಸಿದ ನಾಲ್ಕನೇ ದೇಶವಾಗಿ ಭಾರತ ಹೆಸರಾಗಲಿದೆ.ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ನ್ನು ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ.

Exit mobile version