28.3 C
Bengaluru
Friday, October 11, 2024

ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್ 12: ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. 70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಇಂದಿರಾ ಕ್ಯಾಂಟಿನ್ ಆಹಾರಕ್ರಮದಲ್ಲಿ ಬದಲಾವಣೆ

ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಮತ್ತೆ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನ: ಚಾಲನೆ ನೀಡಲಾಗುವುದು ಎಂದು ಎಂದು ತಿಳಿಸಿದರು.

Related News

spot_img

Revenue Alerts

spot_img

News

spot_img