Revenue Facts

Chennai Airport Terminal: ಚೆನ್ನೈ ವಿಮಾನ ನಿಲ್ದಾಣದ ಇಂಟಿಗ್ರೇಟೆಡ್ ಟರ್ಮಿನಲ್ ಉದ್ಘಾಟನೆ ಏಪ್ರಿಲ್ 8 ರಂದು

Chennai Airport Terminal: ಚೆನ್ನೈ ವಿಮಾನ ನಿಲ್ದಾಣದ ಇಂಟಿಗ್ರೇಟೆಡ್ ಟರ್ಮಿನಲ್ ಉದ್ಘಾಟನೆ ಏಪ್ರಿಲ್ 8 ರಂದು

ಬೆಂಗಳೂರು, ಏ. 07 :ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ, ಏಪ್ರಿಲ್ 8 ರಂದು ಚೆನ್ನೈ ವಿಮಾನ ನಿಲ್ದಾಣದ ಹೊಸ, ಅತ್ಯಾಧುನಿಕ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ವಿಶ್ವ ದರ್ಜೆಯ ಸೌಕರ್ಯಗಳು ಮತ್ತು ಕಲಾತ್ಮಕವಾಗಿ ವಿನ್ಯಾಸಗೊಳಿಸಲಾದ ಐಕಾನಿಕ್ ಕಟ್ಟಡದೊಂದಿಗೆ ಬೃಹತ್ ಬದಲಾವಣೆಯೊಂದಿಗೆ ನೂತನ ರೈಲು ನಿಲ್ದಾಣ ನಿರ್ಮಾಣವಾಗಲಿದೆ.720 ಕೋಟಿ ರೂ. ವೆಚ್ಚದಲ್ಲಿ ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಅದರಂತೆ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2 ಮತ್ತು 3 ಅನ್ನು ಕೆಡವಲಾಗಿದೆ ಮತ್ತು ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ನಿರ್ಮಿಸಲಾಗಿದೆ.

ಇದು ಚೆನ್ನೈನ ಮೂಲಸೌಕರ್ಯಕ್ಕೆ ಪ್ರಮುಖ ಸೇರ್ಪಡೆಯಾಗಲಿದೆ ಎಂದು ಹೇಳಿದರು. “ಇದು ಚೆನ್ನೈನ ಮೂಲಸೌಕರ್ಯಕ್ಕೆ ಪ್ರಮುಖ ಸೇರ್ಪಡೆಯಾಗಿದೆ . ಇದು ಸಂಪರ್ಕವನ್ನು ಹೆಚ್ಚಿಸುತ್ತದೆ ಮತ್ತು ಸ್ಥಳೀಯ ಆರ್ಥಿಕತೆಗೆ ಪ್ರಯೋಜನವನ್ನು ನೀಡುತ್ತದೆ. ಎಂದು ಅವರು ಟ್ವೀಟ್ ಮಾಡಿದ್ದಾರೆ. “ಇದು ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ಬದ್ಧತೆಯ ಪ್ರತಿಬಿಂಬವಾಗಿದೆ” ಎಂದು ನಾಗರಿಕ ವಿಮಾನಯಾನ ಸಚಿವಾಲಯ ಟ್ವೀಟ್ ಮಾಡಿದೆ.

ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣವನ್ನು 720 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದ್ದು, ಏರ್​​ಪೋರ್ಟ್ ಮಾದರಿಯ ಭವ್ಯ ನಿಲ್ದಾಣ ಮುಂದಿನ ದಿನಗಳಲ್ಲಿ ತಲೆಯೆತ್ತಲಿದೆ. ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮಿಸಲಿದ್ದು, ಅಲ್ಲಿ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.ಅಧಿಕೃತ ಮಾಹಿತಿಯ ಪ್ರಕಾರ, ಚೆನ್ನೈ ವಿಮಾನ ನಿಲ್ದಾಣದಲ್ಲಿ 2,20,972 ಚದರ ಮೀಟರ್ ವಿಸ್ತೀರ್ಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವು ತಮಿಳುನಾಡಿನಲ್ಲಿ ಹೆಚ್ಚುತ್ತಿರುವ ವಾಯು ಸಂಚಾರವನ್ನು ಪೂರೈಸಲು ಸಿದ್ಧವಾಗಿದೆ. 1,260 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

108 ಮೀಟರ್ ಅಗಲದ ಎರಡು ಅಂತಸ್ತಿನ ಸ್ಕೈ ಕಾನ್ಕೋರ್ಸ್ ಕೂಡ ನಿಲ್ದಾಣದಲ್ಲಿ ಇರಲಿವೆ. ಮೊದಲ ಅಂತಸ್ತಿನಲ್ಲಿ ಪ್ರಯಾಣಿಕರಿಗೆ ಸೇವೆ ಮತ್ತು ಎರಡನೇ ಹಂತವು ಮೇಲ್ಛಾವಣಿಯ ಪ್ಲಾಜಾವಾಗಿ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ.ಚೆನ್ನೈ ವಿಮಾನ ನಿಲ್ದಾಣದಲ್ಲಿನ ಹೊಸ ಟರ್ಮಿನಲ್ ಪ್ರಯಾಣಿಕರ ನಿರ್ವಹಣೆ ಸಾಮರ್ಥ್ಯವನ್ನು ವಾರ್ಷಿಕ 2.3 ಕೋಟಿಯಿಂದ 3.5 ಕೋಟಿಗೆ ಹೆಚ್ಚಿಸಲಿದೆ.ತಮಿಳು ಭಾಷೆಯ ಶ್ರೇಷ್ಠತೆಯನ್ನು ತೋರಿಸಲು ತಮಿಳು ಸಂಗೀತ, ನೃತ್ಯ ಮತ್ತು ನಾಟಕವನ್ನು ಚಿತ್ರಿಸುವ ವರ್ಣಚಿತ್ರಗಳನ್ನು ಗೋಡೆಗಳ ಮೇಲೆ ಬರೆಯಲಾಗುದೆ.

ಚೆನ್ನೈ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದ ನಂತರ, ಪ್ರಧಾನಮಂತ್ರಿ ಅವರು ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚೆನ್ನೈ-ಕೊಯಮತ್ತೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿದ್ದಾರೆ. ಅವರು ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿದ್ದು, ನಂತರ ಹೈದರಾಬಾದ್‌ನ ಏಮ್ಸ್ ಬೀಬಿನಗರದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

 

Exit mobile version