ಹುಬ್ಬಳ್ಳಿ, ಮೇ 06: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬಸ್ಥರ ಹತ್ಯೆ ಆಡಿಯೋ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಲಾಗುವುದು,ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬಸ್ಥರ ಹತ್ಯೆಯ ಕುರಿತ ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಆಡಿಯೋ ತಿರುಚಲಾಗಿದೆಯೇ ಎಂದು ನೋಡಬೇಕು.ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುವುದು ಎಂದರು.
ಸುಳ್ಳು ಸುದ್ದಿ
ಬಿ.ಎಲ್ ಸಂತೋಷ ಲಿಂಗಾಯತ ಮತಗಳ ಅಗತ್ಯವಿಲ್ಲ ಎಂದಿರುವುದು ಸುಳ್ಳು ಸುದ್ದಿ ಎಂದ ಮುಖ್ಯ ಮಂತ್ರಿಗಳು ಈಗಾಗಲೇ ಈ ಬಗ್ಗೆ ದೂರು ಸಹ ದಾಖಲು ಮಾಡಲಾಗಿದೆ ಎಂದರು.
ಅಭ್ಯಂತರ ಇಲ್ಲ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಏನು ಬೇಕಾದರೂ ಪಠಣ ಮಾಡಲಿ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ
ಶಿವರಾಜ್ ಕುಮಾರ್ ಮೇಲೆ ಬಿಜೆಪಿ ಟ್ರೋಲ್ ಮಾಡಿರುವ ಬಗ್ಗೆ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಯಾವ ನಟರು ಕೂಡ ಯಾವ ಪಕ್ಷ ಪರವಾಗಿ ಪ್ರಚಾರ ಮಾಡಬಹುದು.ಪ್ರತಾಪ್ ಸಿಂಹ ಮತ್ತು ಶಿವರಾಜ್ ಕುಮಾರ್ ಟೀಕೆ ಅವರಿಗೆ ಬಿಟ್ಟ ವಿಚಾರ. ಶಿವರಾಜ್ ಕುಮಾರ್ ಪ್ರಚಾರದ ಬಗ್ಗೆ ನನಗೇನು ಅಭ್ಯಂತರ ಇಲ್ಲ ಎಂದರು.
ಮೋದಿ ಅಲೆ ಮೊದಲಿಗಿಂತ ಹೆಚ್ಚು
ಸೋನಿಯಾ ಗಾಂಧಿ ಪ್ರಚಾರಕ್ಕೆ ಬರುತ್ತಿರುವ ಬಗ್ಗೆ ಮಾತನಾಡಿ ಅದು ಅವರ ಪಕ್ಷದ ಪ್ರಚಾರ. ಇಂದು ಪ್ರಧಾನಿ ಮೋದಿ ಹಾವೇರಿಗೆ ಬರುತ್ತಿದ್ದು, ಮೊದಲಿಗಿಂತಲೂ ಈಗ ಮೋದಿ ಅಲೆ ಜಾಸ್ತಿಯಾಗಲಿದೆ ಎಂದರು.