Revenue Facts

ರೈತ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ರೈತ ಶಕ್ತಿ ಯೋಜನೆಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು, ಜ. 16: ಕೃಷಿಕರ ಮೇಲಿನ ಆರ್ಥಿಕ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‍ನಲ್ಲಿ ಘೋಷಿಸಿದಂತೆ ರೈತ ಶಕ್ತಿ ಯೋಜನೆಯನ್ನು ಇದೇ ತಿಂಗಳಾಂತ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ ಗೆ ಸಹಾಯಧನವನ್ನು ನೀಡುವ ” ರೈತ ಶಕ್ತಿ ” ಯೋಜನೆ ಈ ತಿಂಗಳಾಂತ್ಯಕ್ಕೆ ಅನುಷ್ಠಾನಗೊಳ್ಳಲಿದೆ.

ರೈತ ಶಕ್ತಿ ಯೋಜನೆಗೆ ಚಾಲನೆ :

ಕೃಷಿ ಯಾಂತ್ರೀಕರಣವು ಡೀಸೆಲ್ ಮೇಲೆ ಅವಲಂಬಿತವಾಗಿದ್ದು, ರೈತರ ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022-23ನೆ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ‘ರೈತ ಶಕ್ತಿ ಯೋಜನೆ’ಯನ್ನು ಜಾರಿಗೊಳಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಇಂಧನದ ವೆಚ್ಚದ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಈ “ರೈತ ಶಕ್ತಿ ಯೋಜನೆ” ತಿಂಗಳಾಂತ್ಯಕ್ಕೆ ಜಾರಿಯಾಗಲಿದೆ.

ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ. ಪ್ರತಿ ಎಕರೆಗೆ 250ರೂ.ನಂತೆ ಗರಿಷ್ಠ 5 ಎಕರೆಗೆ ಡಿಬಿಟಿ ಮೂಲಕ ಡೀಸೆಲ್‍ಗೆ ಸಹಾಯಧನವನ್ನು ನೀಡುವ ಯೋಜನೆ ಇದಾಗಿದ್ದು, ಸುಮಾರು 45ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಬಿಡುಗಡೆ ಮಾಡಲಿದ್ದಾರೆ.ನಗದು ಯೋಜನೆಯ ಫ್ರೂಟ್ಸ್ ಪೋರ್ಟಲ್‍ನಲ್ಲಿ ನೋಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ.

ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಎಕರೆಗೆ 250ರೂ.ಗಳಂತೆ ಗರಿಷ್ಠ 5ಎಕರೆಗೆ 1,250 ರೂ.ಗಳವರೆಗೆ ಡೀಸೆಲ್ ಸಹಾಯಧನ ನೀಡಲಾಗುವದು.ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ DBT ವೋರ್ಟಲ್ ಮೂಲಕ ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ DBT ವೋರ್ಟಲ್ ಮೂಲಕ ಆಧಾರದ ಪೋಸ್ಟ್ ಆಫೀಸ್ ಖಾತೆಗೆ,ಸೀಡೆಡ್ ಬ್ಯಾಂಕ್ ಮೂಲಕ ವರ್ಷಕ್ಕೊಮ್ಮೆ ವರ್ಗಾಯಿಸಲಾಗುವುದು.

Exit mobile version