ಮೈಸೂರು;ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಆವರಣಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಮಿಸಿದರು.ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹ್ದದೇವಪ್ಪ, ಜಿಲ್ಲಾಧಿಕಾರಿ ರಾಜೇಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದರು.ಈ ವೇಳೆ ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಮುಖ್ಯಮಂತ್ರಿಗಳು ಗೌರವ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಇಂದಿನಿಂದ ಮೂರು ದಿನಗಳಲ್ಲಿ ಮೈಸೂರು ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿವೆ. ಸರ್ಕಾರ ಘೋಷಿಸಿದ 4 ನೇ ಗ್ಯಾರೆಂಟಿ ಗೃಹಲಕ್ಷ್ಮಿ ಯೋಜನೆಗೆ ಆ. 30 ರಂದು ಚಾಲನೆ ನೀಡಲಾಗುತ್ತಿದೆ ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಜನ ಸೇರುತ್ತಿದ್ದಾರೆ ಎಂದು ಅವರು ತಿಳಿಸಿದರು.ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಿಂದ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮಕ್ಕೆ ಆಗಮಿಸುವರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.