ಮಧುಗಿರಿ;ಕ್ಷೀರ ಭಾಗ್ಯ ಜಾರಿಯಾಗಿ 10 ವರ್ಷ ಪೂರೈಸಿದ್ದು, ಈ ಹಿನ್ನಲೆಯಲ್ಲಿ ದಶಮಾನೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ,ಕ್ಷೀರಭಾಗ್ಯ ದಶಮಾನೋತ್ಸವ ಸಂಭ್ರಮಕ್ಕೆ ಮಧುಗಿರಿಯಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಬುಧವಾರ (ಸೆ. 6) ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಶಿಕ್ಷಣ ಮಹಾಮಂಡಳ ನಿಯಮಿತ, ಬೆಂಗಳೂರು ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳ ಸಹಯೋಗದೊಂದಿಗೆ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆಯ ಸಮಾರಂಭವು ಸ 06 ಬುಧವಾರ ಬೆಳಗ್ಗೆ ರವರುಗ 11:00 ಕ್ಕೆ ರಾಜೀವ್‌ಗಾಂಧಿ ಕ್ರೀಡಾಂಗಣ, ಮಧುಗಿರಿಯಲ್ಲಿ ಜರುಗಲಿದೆ,ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದ,ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಸಿದ್ಧಗೊಂಡಿದ್ದು, ತಳಿರುತೋರಣಗಳಿಂದ ಬೀದಿಗಳು ಸಿಂಗಾರಗೊಂಡಿವೆ.ಭದ್ರತೆಗೆ 1,500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಪಟ್ಟಣದ ಎಲ್ಲ ಕಚೇರಿಗಳಿಗೂ ವಿದ್ಯುತ್ ಅಲಂಕಾರ ಮಾಡಲಾಗಿದೆ.ಡಿಸಿಎಂ ಡಿ.ಕೆ. ಶಿವಕುಮಾರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ,ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಜಿಲ್ಲೆಯ ಶಾಸಕರು ಸೇರಿ 50ಕ್ಕೂ ಹೆಚ್ಚು ಗಣ್ಯರು ವೇದಿಕೆ ಅಲಂಕರಿಸಲಿದ್ದಾರೆ.ಈ ಯೋಜನೆಯಿಂದ ರಾಜ್ಯದ 62 ಲಕ್ಷ ಮಕ್ಕಳಿಗೂ ಅನುಕೂಲವಾಗಿದೆ.ತಾಲ್ಲೂಕಿನಲ್ಲಿ ಒಟ್ಟು ₹156 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಲಾಗುವುದು.1.49 ಕೋಟಿ ರೂ. ವೆಚ್ಚದ ಕ್ಷೇತ್ರದ ಕೃಷಿ ಇಲಾಖೆಯ ತುಂತುರು ನೀರಾವರಿ ಘಟಕಗಳ ವಿತರಣೆ, 26 ಲಕ್ಷ ರೂ. ವೆಚ್ಚದ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ, 7.74 ಕೋಟಿ ರೂ. ವೆಚ್ಚದ ಅಲ್ಪಸಂಖ್ಯಾತರ ವಿವಿಧ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿನಿಲಯಗಳ ಶಂಕುಸ್ಥಾಪನೆ, 6.5 ಕೋಟಿ ರೂ. ವೆಚ್ಚದ ವಿದ್ಯಾರ್ಥಿನಿಲಯ ಕಟ್ಟಡದ ಶಂಕುಸ್ಥಾಪನೆ ಮತ್ತು ಅಂತರ್ಜಾತಿ ವಿವಾಹವಾದ 7 ಜೋಡಿಗಳಿಗೆ 10 ಲಕ್ಷ ರೂ. ವಿತರಣೆ, 48 ಲಕ್ಷ ರೂ. ವೆಚ್ಚದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಕಟ್ಟಡಗಳ ಉದ್ಘಾಟನೆ, 58.63 ಕೋಟಿ ರೂ. ವೆಚ್ಚದಲ್ಲಿ ಗ್ರಾಮಗಳಿಗೆ ಕುಡಿಯುವ ನೀರು ಯೋಜನೆಗೆ ಭೂಮಿಪೂಜೆ ನೆರವೇರಿಸಲಾಗುತ್ತದೆ.