Revenue Facts

ಉಡುಪಿ ಕಾಲೇಜು ಶೌಚಾಲಯ ಪ್ರಕರಣದಲ್ಲಿ ಸಿಐಡಿ ತನಿಖೆ: ರಾಜ್ಯ ಸರ್ಕಾರ ಆದೇಶ

ಉಡುಪಿ ಕಾಲೇಜು ಶೌಚಾಲಯ ಪ್ರಕರಣದಲ್ಲಿ ಸಿಐಡಿ ತನಿಖೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಉಡುಪಿಯ ನೇತ್ರಜ್ಯೋತಿ ಪಾರಾಮೆಡಿಕಲ್‌ ಕಾಲೇಜಿನ ಶೌಚಾಲಯ ವೀಡಿಯೋ ಪ್ರಕರಣವನ್ನು ಸೋಮವಾರ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ ಬಿಜೆಪಿ ಸೇರಿದಂತೆ ಇತರೆ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಬಳಿಕ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿ ಗೆ ವಹಿಸಿ ಆದೇಶಿಸಲಾಗಿದೆ, ಎಂದು ಹೇಳಿದ್ದಾರೆ.ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮೂವರು ಆರೋಪಿಗಳು ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.ನಿರ್ಲಕ್ಷ ತೋರಿಸಿದ ಪೊಲೀಸರು ಜು.25ರಂದು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದರು. ಈ ನಡುವೆ ತನಿಖಾಧಿಕಾರಿಯನ್ನು ಬದಲಾಯಿಸಿದರೂ ತನಿಖೆಯಲ್ಲಿ ಯಾವುದೇ ಮಹತ್ವದ ಪ್ರಗತಿಯಾಗದ ಹಿನ್ನೆಲೆಯಲ್ಲಿ ಸರ್ಕಾರ ಇದೀಗ  ಪ್ರಕರಣವನ್ನು ಸಿಐಡಿಗೆ ಒಪ್ಪಿಸಿದೆ.

Exit mobile version