#cloudburst #himachalpradesh #rain
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಮಳೆ ಸುರಿಯುತ್ತಿದ್ದು, ಮತ್ತೆ ಮೇಧಸ್ತೋಟ ಸಂಭವಿಸಿದ ಮಳೆ ಅನಾಯತದಿಂದ ಇದುವರೆಗೆ 7 ಮಂದಿ ಮೃತಪಟ್ಟಿದ್ದು, ಮೂವರು ಕಾಣೆಯಾಗಿದ್ದಾರೆ. ಹಿಮಾಚಲ ಪ್ರದೇಶದ ಸೋಲನ್‌ನ ಜಾಡೋನ್ ಗ್ರಾಮದಲ್ಲಿ ಸೋಮವಾರ ಮೇಘಸ್ಫೋಟ ಸಂಭವಿಸಿದ ನಂತರ ಹಠಾತ್ ಪ್ರವಾಹ ಉಂಟಾಗಿದ್ದು, ಎರಡು ಮನೆಗಳು ಮತ್ತು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿದೆ ಎಂದು ಕಂದಘಾಟ್ ಉಪವಿಭಾಗೀಯ ಮ್ಯಾಜಿಕ್ರೇಟ್ ಸಿದ್ಧಾರ್ಥ ಆಚಾರ್ಯ ಹೇಳಿದ್ದಾರೆ. ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಮೂವರು ಕಾಣೆಯಾಗಿದ್ದಾರೆ. ಐವರನ್ನುರಕ್ಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ಕಳೆದ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶ ಮತ್ತು ನೆರೆಯ ಉತ್ತರಾಖಂಡದಲ್ಲಿ ಭಾರೀ ಮಳೆಯು ಮುಂದುವರಿದಿದ್ದು, ಭೂಕುಸಿತಗಳು ಪ್ರಮುಖ ರಸ್ತೆಗಳನ್ನು ನಿರ್ಬಂಧಿಸಿವೆ, ಸೇತುವೆಗಳು ಕೊಚ್ಚಿಹೋಗಿವೆ, ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಒತ್ತಾಯಿಸಲಾಯಿತು ಮತ್ತು ನದಿಗಳ ನೀರಿನ ಮಟ್ಟವು ಎತ್ತರಕ್ಕೆ ತಲುಪಿದೆ.ನಿರಂತರ ಮಳೆಯಿಂದಾಗಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳನ್ನು ಆಗಸ್ಟ್ 14 (ಸೋಮವಾರ) ವರೆಗೆ ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಘೋಷಿಸಿದ್ದಾರೆ.