Revenue Facts

ವರ್ಚ್ಯುವಲ್ ಮೂಲಕ 9 ಹೊಸ ವಿವಿಗಳನ್ನು ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ.

ವರ್ಚ್ಯುವಲ್ ಮೂಲಕ 9 ಹೊಸ  ವಿವಿಗಳನ್ನು ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು ಮಾ29: ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಹಾಸನ, ಕೊಡಗು, ಹಾವೇರಿ, ಕೊಪ್ಪಳ, ಬಾಗಲಕೋಟೆ ಮತ್ತು ಬೀದರ್ ವಿವಿ ಹಾಗೂ ಮಂಡ್ಯ ಮತ್ತು ರಾಯಚೂರು ಸಂಯೋಜಿತ ವಿಶ್ವವಿದ್ಯಾಲಯ ಸೇರಿದಂತೆ 9 ವಿವಿಗಳನ್ನು ಉದ್ಘಾಟಿಸಿದ್ದ ಬೆನ್ನಲ್ಲೇ ಸರ್ಕಾರ ಕುಲಸಚಿವರನ್ನು ನೇಮಕ ಮಾಡಿ ಆದೇಶಿಸಿದೆ.ಇದೇ ಸಂದರ್ಭದಲ್ಲಿ ಸರ್ಕಾರಿ ಕೃಷ್ಣರಾಜೇಂದ್ರ ಸಿಲ್ವರ್‌ ಜ್ಯೂಬಿಲಿ ತಾಂತ್ರಿಕ ಮಹಾವಿದ್ಯಾಲಯ, ಉನ್ನತ ಶಿಕ್ಷಣ ಸೌಧ ಹಾಗೂ ತಾಂತ್ರಿಕ ಶಿಕ್ಷಣ ಭವನ ಕಟ್ಟಡ ಉನ್ನತೀಕರಣದ ಶಂಕುಸ್ಥಾಪನೆ ನೆರವೇರಿಸಲಾಯಿತು.ಧಾರವಾಡದಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿಯ ಕಟ್ಟಡವನ್ನು ಕೂಡ ಲೋಕಾರ್ಪಣೆ ಮಾಡಲಾಯಿತು.

ಎಲ್ಲ ವಿಶ್ವವಿದ್ಯಾಲಯಗಳು (University) ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಶಿಕ್ಷಣ ಬೆಳವಣಿಗೆ ಆಗಬೇಕು.ಮುಂಬರುವ ದಿನಗಳಲ್ಲಿ ಕರ್ನಾಟಕವನ್ನು ವಿಶ್ವದಲ್ಲಿಯೇ ಅತಿ ದೊಡ್ಡ ಎಜುಕೇಷನ್ ಹಬ್ ಮಾಡಬೇಕೆಂಬುದು ಸರ್ಕಾರದ ಗುರಿಯಾಗಿದೆ.ಯುವಜನರ ಭವಿಷ್ಯವನ್ನು ಉತ್ತಮವಾಗಿ ರೂಪಿಸಿದರೆ ದೇಶದ ಭವಿಷ್ಯ ಉಜ್ವಲವಾಗಿರುತ್ತದೆ.ಈ ರೀತಿಯ ವಿಶ್ವವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ ಎಂದು ಜ್ಞಾನಜ್ಯೋತಿ ಸಭಾಂಗಣದಲ್ಲಿ ಒಂಭತ್ತು ನೂತನ ವಿಶ್ವವಿದ್ಯಾಲಯಗಳನ್ನು ವರ್ಚುಯಲ್ ಆಗಿ ಉದ್ಘಾಟಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು
ರಾಜ್ಯದ 7 ಇಂಜಿನಿಯರಿಂಗ್‌ ಕಾಲೇಜುಗಳನ್ನು ‘ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಕೆಐಟಿ)ಗಳಾಗಿ ಉನ್ನತೀಕರಿಸಲಾಗಿದೆ. ಜಿಲ್ಲೆಗೊಂದು ವಿಶ್ವವಿದ್ಯಾಲಯ ಇರಬೇಕು ಎಂಬ ಆಶಯದೊಂದಿಗೆ 9 ಹೊಸ ವಿಶ್ವವಿದ್ಯಾಲಯಗಳನ್ನು ನಿರ್ಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ಬೆನ್ನಲ್ಲೇ ಉನ್ನತ ಶಿಕ್ಷಣ ಇಲಾಖೆಯಿಂದ 9 ನೂತನ ವಿವಿಗಳಿಗೆ ಕುಲಸಚಿವರು ಹುದ್ದೆಗಳಿಗೆ ನೇಮಕ ಮಾಡಿ ಆದೇಶಿಸಿದೆ.aರಾಜ್ಯದ 7 ನೂತನ ವಿವಿಗಳಿಗೆ ಕುಲಪತಿಗಳ ನೇಮಕ ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.

ನೂತನ 7 ವಿಶ್ವವಿದ್ಯಾಲಯಗಳ ಕುಲಪತಿಗಳು

ಡಾ. ಬಿ.ಕೆ.ರವಿ – ಕೊಪ್ಪಳ ವಿಶ್ವವಿದ್ಯಾಲಯ
ಅಶೋಕ್ ಸಂಗಪ್ಪ ಆಲೂರು – ಕೊಡಗು ವಿವಿ
ಡಾ.ಎಂ.ಆರ್ ಗಂಗಾಧರ್ – ಚಾಮರಾಜನಗರ ವಿವಿ
ಡಾ.ಆನಂದ್ ಶರದ್ – ಬಾಗಲಕೋಟೆ ವಿವಿ
ಡಾ.ಬಿ.ಎಸ್ ಬಿರಾದಾರ – ಬೀದರ್ ವಿವಿ
ಡಾ.ಸುರೇಶ್ ಎಚ್ ಜಂಗಮಶೆಟ್ಟಿ – ಹಾವೇರಿ ವಿವಿ
ಡಾ.ಟಿ.ಸಿ.ತಾರಾನಾಥ – ಹಾಸನ ವಿವಿ

Exit mobile version