26.7 C
Bengaluru
Sunday, December 22, 2024

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ಬಿಹಾರ ಸಿಎಂ, ಡಿಸಿಎಂ, ತಮಿಳುನಾಡು ಸಿಎಂಗಳಿಗೆ ಆಹ್ವಾನ

ಬೆಂಗಳೂರು ಮೇ 18;ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ವಿಚಾರ ಬಗೆಹರಿದಿದೆ. ಅಧಿಕಾರ ಹಂಚಿಕೆ ಮಾಡಲಾಗಿದ್ದು, ಆರಂಭದ ಎರಡೂವರೆ ವರ್ಷ ಸಿದ್ದರಾಮಯ್ಯ ಮತ್ತು ಉಳಿದ ಎರಡೂವರೆ ವರ್ಷ ಡಿ ಕೆ ಶಿವಕುಮಾರ್ ಸಿಎಂ ಪಟ್ಟ ಅಲಂಕರಿಸಿ ಎಂದು ಮಲ್ಲಿಕಾರ್ಜುನ ಖರ್ಗೆಯವರು ಸೂಚಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. ಶನಿವಾರ (ಮೇ 20) ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಕಂಠೀರವ ಸ್ಟೇಡಿಯಂನಲ್ಲಿ ಮೇ 20 ಶನಿವಾರದಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

j

ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಡಿಸಿಎಂ ತೇಜಸ್ವಿಯಾದವ್‌, ತಮಿಳುನಾಡು ಸಿಎಂ ಸ್ಟಾಲಿನ್‌ ಅವರನ್ನು ಆಹ್ವಾನಿಸಲಾಗಿದೆ. ಎಂದು ಸರ್ಕಾರ ಗುರುವಾರ ತಿಳಿಸಿದೆ.ಸ್ಟಾಲಿನ್ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಕರೆ ಮಾಡಿ ಮೇ 20ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರ ರಾಜಕಾರಣದ ಕೆಲವು ದೊಡ್ಡ ನಾಯಕರು ಭಾಗವಹಿಸಲಿದ್ದಾರೆ. ಇದರ ಮೂಲಕ ಮುಂದಿನ ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಮಹತ್ವದ ಸಂದೇಶವನ್ನು ರವಾನಿಸಲಿದ್ದಾರೆ,ಪ್ರಮಾಣ ವಚನ ಸ್ವೀಕಾರಕ್ಕೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಪ್ರತಿಪಕ್ಷ ನಾಯಕರಿಗೆ ಆಹ್ವಾನ ಹೋಗಲಿದೆ. ಸಮಾರಂಭದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತೆಲಂಗಾಣ ಸಿಎಂ ಟಿ.ಎಸ್.‌ ಚಂದ್ರಶೇಖರ ರಾವ್‌, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಭಾಗವಹಿಸುವುದು ಬಹುತೇಕ ಖಚಿತ.224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ 135 ಸ್ಥಾನಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ,

Related News

spot_img

Revenue Alerts

spot_img

News

spot_img