20.8 C
Bengaluru
Thursday, December 5, 2024

CM Janata Darshan:ಇಂದು‌‌ ರಾಜ್ಯಮಟ್ಟದ ಸಿಎಂ‌ ಜನತಾದರ್ಶನ

ಬೆಂಗಳೂರು: ಎರಡನೇ ಬಾರಿ ಸಿಎಂ ಆದ ಬಳಿಕ ಮೊದಲ ಪೂರ್ಣಾವಧಿ ಜನತಾ ದರ್ಶನವನ್ನು(Janatadarshana) ಹಮ್ಮಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜನರ ಸಮಸ್ಯೆ ಆಲಿಸುವ ಉದ್ದೇಶ ದಿನ ಮೀಸಲಿಟ್ಟಿದ್ದಾರೆ. ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ಸೋಮ ವಾರ ಬೆ.9.30ರಿಂದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಮುಖ್ಯಮಂತ್ರಿ ಸಚಿವಾಲಯ ಇದಕ್ಕಾಗಿ ಸಕಲ ಸಿದ್ಧತೆ ನಡೆಸಿದ್ದು, ಮುಖ್ಯಮಂತ್ರಿ ಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್(Rajaneeshgoyal) ಅವರು ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆ ಪರಿಶೀಲಿಸಿದರು. ಜನತಾ ದರ್ಶನದಲ್ಲಿ ಭಾಗಿಯಾಗುವವರು 1902ಕ್ಕೆ ಕರೆಮಾಡಿ ಆನ್‌ಲೈನ್ ಮೂಲಕ ಮಾಡಿಕೊಳ್ಳಬಹುದಾಗಿದೆ.ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರ್‌ಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತ ನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟ ರ್‌ಗಳನ್ನು ಮೀಸಲಿರಿಸಲಾಗಿದೆ. ಸ್ವೀಕರಿಸಿದ ಆಹ ವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂ ಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅಹವಾಲು ಆಲಿಸಿ ಪರಿಹಾರ ಒದಗಿಸುವ ಆಶಯದೊಂದಿಗೆ ನವೆಂಬರ್ ಇಂದು ಬೆಳಿಗ್ಗೆ 9.30 ಗಂಟೆಯಿಂದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಸಚಿವಾಲಯವು ಸಕಲ ಸಿದ್ಧತೆಗಳನ್ನು ನಡೆಸಿದ್ದು,ಪಂಚಾಯಿತಿ ಸಿಇಒಗಳು(CEO) ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಎಲ್ಲ ಜಿಲ್ಲಾ, ಉಪವಿಭಾಗ, ತಾಲೂಕುಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ.ಸಾರ್ವಜನಿಕರು ದೂರು ಅಥವಾ ಅಹವಾಲು ಸಲ್ಲಿಕೆ ಮಾಡುವ ವ್ಯವಸ್ಥೆ ಸರಳೀಕರಣಗೊಳಿಸುವ ಸಲುವಾಗಿ ಕ್ಯೂಆರ್ ಕೋಡ್ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿಗಳ ಕಚೇರಿಯು ಕ್ಯೂಆರ್ ಕೋಡ್ ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಕ್ಯೂಆರ್ ಕೋಡ್‌ ಸ್ಕ್ಯಾನ್‌(QR Code Scan) ಮಾಡಿ ಆನ್‌ಲೈನ್ ಮೂಲಕ ದೂರು ಸಲ್ಲಿಸಬಹುದು. ಜತೆಗೆ 1902 ಗೆ ಕರೆ ಮಾಡಿ ದೂರವಾಣಿ ಮೂಲಕವೂ ಅಹವಾಲು ಸಲ್ಲಿಸಬಹುದು.

Related News

spot_img

Revenue Alerts

spot_img

News

spot_img