22.8 C
Bengaluru
Thursday, June 20, 2024

ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್‌ ಜೊತೆ ಇಂದು ಸಿಎಂ ಸಭೆ

ಬೆಂಗಳೂರು ಜು.14 :ಎಲ್ಲಾ ಹಾಲು ಒಕ್ಕೂಟಗಳ ನಿರ್ದೇಶಕರ ಜೊತೆ ಸಿಎಂ ಸಿದ್ದರಾಮಯ್ಯ ಇಂದು ಸಭೆ ನಡೆಸಲಿದ್ದಾರೆ. ನಂದಿನಿ ಹಾಲು, ಮೊಸರು ಹೆಚ್ಚಳದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.ರಾಜ್ಯದಲ್ಲಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಹಾಲಿನ ದರ ಏರಿಕೆಗೆ ಹಾಲು ಒಕ್ಕೂಟಗಳಿಂದ ಒತ್ತಾಯ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ 5.30 ಕ್ಕೆ ಸಭೆ ನಡೆಯಲಿದೆ.ಹಾಲು ಒಕ್ಕೂಟ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಏರಿಕೆ ಮಾಡುವಂತೆ ಸರ್ಕಾರದ ಮುಂದೆ ಪ್ರಸ್ತಾವನೆ ಇಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ ಹೊರ ಬೀಳಲಿದೆ.ಜುಲೈ 11ರಂದೇ ಕೆಎಂಎಫ್‌ ಪದಾಧಿಕಾರಿಗಳು ಹಾಗೂ ಹಾಲು ಒಕ್ಕೂಟಗಳ ಅಧ್ಯಕ್ಷರ ನಿಯೋಗ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಹಾಲಿನ ದರ ಏರಿಕೆ ಕುರಿತು ಚರ್ಚಿಸಬೇಕಿತ್ತು. ಆದರೆ, ವಿವಿಧ ಕಾರಣಗಳಿಂದ ಸಭೆಯನ್ನು ಮುಂದೂಡಲಾಗಿತ್ತು.

Related News

spot_img

Revenue Alerts

spot_img

News

spot_img