Revenue Facts

ಬೆಳಗಾವಿ ಅಧಿವೇಶನದಲ್ಲಿ 8 ಘೋಷಣೆ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಸಂಬಂಧಿಸಿದಂತೆ ಬೆಳಗಾವಿ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ಚರ್ಚೆಗೆ ಸಂಬಂಧಿಸಿದಂತೆ ಸದನಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದು ಎಂಟು ಘೋಷಣೆಗಳನ್ನು ಮಾಡಿದ್ದಾರೆ.

ಕರ್ನಾಟಕ ಏಕೀಕರಣಕ್ಕೆ ಹಲವು ಗಣ್ಯರು ಹೋರಾಡುದ್ದಾರೆ. ಭಾಷಾವಾರು ಪ್ರಾಂತ್ರ್ಯ ರಚನೆಯಾಗುವಾಗಲು ಹೋರಾಟ ಮಾಡಿದವರಿದ್ದಾರೆ. ಹೈದರಾಬಾದ್ ಕರ್ನಾಟಕಕ್ಕೆ 371 ಗೆ ತಿದ್ದುಪಡಿ ಆಗಿ 371 ಜೆ ಪರಿಚ್ಛೇದಕ್ಕಾಗಿ ಧರ್ಮಸಿಂಗ್, ಮಲ್ಲಿಕಾರ್ಜುನ ಖರ್ಗೆ , ವೈಜನಾಥ್ ಪಾಟೀಲ್ ಮುಂತಾದವರು ಹೋರಾಡಿದರು. ಈ ಹಿಂದೆ ನಾನು ಮುಖ್ಯ ಮಂತ್ರಿ ಆಗಿದ್ದಾಗ ಉತ್ತರ ಕರ್ನಾಟದ ಬಗ್ಗೆ ಚರ್ಚೆ ಮಾಡಲಾಗಿದ್ದೆ. ಒಮ್ಮೆ ಬಗ್ಗೆ ೨ ಗಂಟೆಗಳಿಗೂ ಹೆಚ್ಚು ಕಾಲ ಉತ್ತರ ನೀಡಿದ್ದೆ ಎಂದು ಹೇಳಿದ್ದಾರೆ.

ಕರ್ನಾಟಕ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನ ಪೂರ್ತಿ ಖರ್ಚಾಗಿ ಅಭಿವೃದ್ಧಿಯಾಗಬೇಕು. ಕಿತ್ತೂರು ಕರ್ನಾಟಕದ 5 ತಾಲ್ಲೂಕುಗಳು ಸೇರಿದಂತೆ ಹಿಂದುಳಿದ ಹಾಗೂ ಅತೀ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ಕೊಡಲಾಗುವುದು. 2013-14 ರಿಂದ ಕಲ್ಯಾಣ ಕರ್ನಾಟಕಕ್ಕೆ ಈವರೆಗೆ 14,877.36 ಕೋಟಿ ರೂ.ಗಳು ಮೀಸಲಿಡಲಾಗಿದೆ. ಬಿಡುಗಡೆಯಾಗಿದ್ದು 10,280 ಕೋಟಿ ರೂ. ಹಾಗೂ 8,330 ಕೋಟಿ ರೂ. ವೆಚ್ಚವಾಗಿದೆ. ಮುಂದಿನ ವರ್ಷದಿಂದ 5,000 ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗುವುದು.

ಉ.ಕ ಅಭಿವೃದ್ಧಿಗೆ 8 ಸೂತ್ರಗಳ ಘೋಷಣೆ..!

* ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ.

* ನಂಜುಂಡಪ್ಪನವರ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿಯನ್ನು ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಹೈಪವರ್ಕಮಿಟಿ ರಚನೆ.

* ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ .

* ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಪನೆ.

* ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು.

* ಉತ್ತರ ಕರ್ನಾಟಕದ ಮಣ್ಣಿನ ಸವುಳು- ಜವುಳು ಸಮಸ್ಯೆಯನ್ನು ನಿರ್ವಹಿಸಲಾಗುವುದು. ಹಾಗೂ ರೈತರ ಆದಾಯ ಹೆಚ್ಚಳದ ಕಡೆಗೆ ಒತ್ತು ನೀಡಲಾಗುವುದು.

* 5 ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯು ಹೆಚ್ಚಿರುವುದರಿಂದ ಈ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕೊಡಲು ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ಒತ್ತು.

* ಧಾರವಾಡದ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆ.

* ಧಾರವಾಡ ಜಿಲ್ಲೆಯಲ್ಲಿ ಕೈಗಾರಿಕಾ ಕ್ಲಸ್ಟರ್‌ಅನ್ನು ಸ್ಥಾಪಿಸಲಾಗುತ್ತಿದ್ದು.ಈಗಾಗಲೇ 19 ಘಟಕಗಳು ರೂ.1255 ಕೋಟಿ ಬಂಡವಾಳ ಹೂಡಿಕೆ ಮಾಡುತ್ತಿದ್ದು, ಸುಮಾರು 2450 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ.

* ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್‌ಅನ್ನು ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪನೆ.

* ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮ.

ಚೈತನ್ಯ ರವೆನ್ಯೂ ಫ್ಯಾಕ್ಟ್ ನ್ಯೂಸ್

Exit mobile version