#CM Siddaramaiah # meet Prime Minister #Narendra Modi today
ಬೆಂಗಳೂರು;ಇಂದು CM ಸಿದ್ದರಾಮಯ್ಯ ಅವರು ಬೆಳಗ್ಗೆ 11 ಗಂಟೆಗೆ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗುತ್ತಿರುವ ಎರಡನೇ ಭೇಟಿ ಇದಾಗಿದೆ.ಮನರೇಗಾ ಯೋಜನೆಯಡಿ 100 ಮಾನವ ದಿನಗಳನ್ನು 150 ದಿನಗಳಿಗೆ ಹೆಚ್ಚಿಸುವುದು,ಬಳಿಕ ಕಾವೇರಿ ಜಲವಿವಾದ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಕುರಿತು ಸರ್ವಪಕ್ಷ ನಿಯೋಗ ಭೇಟಿಗೆ ಕೇಳಿದರೂ ಪ್ರಧಾನಿ ಅವಕಾಶ ನೀಡುತ್ತಿಲ್ಲ ಎಂದು ಸಿಎಂ ಆರೋಪಿಸಿದ್ದರು. ಈಗ ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕನ್ನು ಬರಪೀಡಿತ ಎಂದು ಘೋಷಿಸಿರುವ ಸರಕಾರ, 30-35 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದ್ದು, ಎನ್‌ಡಿಆರ್‌ಎಫ್(NDRF) ಮಾರ್ಗಸೂಚಿ ಪ್ರಕಾರ ಕನಿಷ್ಠ 18 ಸಾವಿರ ಕೋಟಿ ರೂ.ಗಳ ಪರಿಹಾರಕ್ಕಾಗಿ ಕೇಂದ್ರ ಸರಕಾರದ ಮುಂದೆ ಬೇಡಿಕೆ ಇಟ್ಟಿದೆ.ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ 5,300 ಕೋಟಿ ರೂ. ಬಿಡುಗಡೆ ಮಾಡುವಂತೆ ಆಗ್ರಹಿಸಲಿದ್ದಾರೆ. ದೆಹಲಿ(Dehali) ಭೇಟಿ ವೇಳೆ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲೂ ಭಾಗಿಯಾಗುತ್ತೇನೆ. ಹೈಕಮಾಂಡ್ ನಾಯಕರ ಜೊತೆ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ವರಿಷ್ಠರ ಜೊತೆ ನಿಗಮ, ಮಂಡಳಿ ಬಗ್ಗೆಯೂ ಚರ್ಚೆ ಮಾಡುತ್ತೇವೆ.ಡಿಸೆಂಬರ್ 21ರಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ(CWC) ಸಭೆ ನಡೆಯಲಿದೆ. ಅದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಬ್ಬರೂ ಭಾಗವಹಿಸಲಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು, ಈಗಾಗಲೇ ನಿಗಮ, ಮಂಡಳಿ ಅಧ್ಯಕ್ಷರ ಪಟ್ಟಿಯನ್ನು ಕಳಿಸಲಾಗಿದೆ ಎಂದರು. ಕೊವಿಡ್ ವಿಚಾರವಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಭೆ ನಡೆಸುವಂತೆ ಆರೋಗ್ಯ ಸಚಿವರಿಗೆ ಸೂಚನೆ ನೀಡಿದ್ದೇವೆ ಎಂದರು.