21.1 C
Bengaluru
Monday, December 23, 2024

ಕಲರ್‌ ಕಾಟನ್ ಕ್ಯಾಂಡಿ ಬ್ಯಾನ್; ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ;ರಾಜ್ಯ ಸರ್ಕಾರ ಆದೇಶ

ಬೆಂಗಳೂರು;ರಾಜ್ಯದಲ್ಲಿ ಕಲ‌ರ್ ಕಾಟನ್‌ ಕ್ಯಾಂಡಿ(Cotton candy) ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್ ಒಂದು ವೇಳೆ ಕೃತಕ ಬಣ್ಣದ ಕಾಟನ್ ಕ್ಯಾಂಡಿ ಮಾರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಣ್ಣ ಬಳಸದ ಕಾಟನ್ ಕ್ಯಾಂಡಿ ಮಾರಬಹುದು ಎಂದಿದ್ದಾರೆ. ಸದ್ಯಕ್ಕೆ ಗೋಬಿ ಮಂಚೂರಿ ನಿಷೇಧಿಸಿಲ್ಲ. ವಿವಿಧ ಕಡೆಗಳಲ್ಲಿ ಎರಡು ಪದಾರ್ಥಗಳಲ್ಲಿ ಸ್ಯಾಂಪಲ್‌ಗಳನ್ನು ಸಂಗ್ರಹ ಮಾಡಲಾಯಿತು.ಗೋಬಿ ಮಂಚೂರಿಯ 121 ಮಾದರಿಯನ್ನು ಸಂಗ್ರಹ ಮಾಡಲಾಯಿತು. ಇದಲ್ಲದೇ ಇದರಲ್ಲಿ ಎರಡು ವಿಶಕಾರಿ ಅಂಶಗಳು ಪತ್ತೆಯಾಗಿದ್ದು, ಇದರಿಂದ ಇದರ ಸೇವನೆ ಮಾಡುವುದು ಯೋಗ್ಯವಲ್ಲ ಅಂತ ಹೇಳಿದರು. ಇದನ್ನು ದಿನ ನಿತ್ಯ ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುವ ಸಂಭವಿದೆ ಅಂಥ ಹೇಳಿದರು. ಇದನ್ನು ಬಳಕೆ ಮಾಡುವುದು ಕಾನೂನು ಬಾಹಿರ ಅಂಥ ಹೇಳಿದರು.ಕಾಟನ್ ಕ್ಯಾಂಡಿ ಬ್ಯಾನ್ ಮಾಡಲಾಗಿದ್ದು, ಮಾರಾಟ ಮಾಡಿದರೇ ಮತ್ತು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೇ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.

Related News

spot_img

Revenue Alerts

spot_img

News

spot_img