20.4 C
Bengaluru
Saturday, November 23, 2024

ಹಳೇ ಪಿಂಚಣಿ ಯೋಜನೆ ಜಾರಿಗೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಕರ್ನಾಟಕ ರಾಜ್ಯದಲ್ಲಿ ದಿನಾಂಕ:01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಮೇಲೆ ಓದಲಾದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ದಿನಾಂಕ: 21.02.2023 ಮನವಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಜಾರಿಯಲಿರುವ ಸರ್ಕಾರಿ ನೌಕರರ ನೂತನ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ದೇಶದ ಹಲವು ರಾಜ್ಯಗಳು ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಈ ಹಿಂದೆ ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತವೆ, ಅದೇ ರೀತಿ ಕರ್ನಾಟಕ ರಾಜ್ಯದಲ್ಲೂ ಸಹ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತ ಸರ್ಕಾರವನ್ನು ಕೋರಿರುತ್ತಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಶೀಲಿಸಿದ ಸರ್ಕಾರವು ಈಗಾಗಲೇ ಹಳೆಯ ಪಿಂಚಣಿ ಯೋಜನೆ(Defined Pension Scheme)ಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸುತ್ತದೆ.

ಸರ್ಕಾರದ ಆದೇಶ ಸಂಖ್ಯೆ: ಆಇ ಪಿಇಎನ್/ 89/ 2023 ಬೆಂಗಳೂರು, ದಿನಾಂಕ: 01 ಮಾರ್ಚ್ 2023 ಪ್ರಸ್ತಾವನೆಯನ್ನು ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ನೌಕರರ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಹಳೆಯ ಪಿಂಚಣಿ ಯೋಜನೆ(Defined Pension Scheme)ಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ.ಮುಂದುವರೆದು, ಸಮಿತಿಯು ರಾಷ್ಟ್ರೀಯ ಪಿಂಚಣಿ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪನರ್ ಸ್ಥಾಪಿಸುವ ನಿರ್ಧಾರಗಳನ್ನುಕೈಗೊಂಡಿರುವ ರಾಜ್ಯಗಳಿಗೆ ಭೇಟಿ ನೀಡಿ ಸೂಕ್ತ ಅಧ್ಯಯನ ನಡೆಸಿ ಎರಡು ತಿಂಗಳೊಳಗೆ ವರದಿಯನ್ನು ಆರ್ಥಿಕ ಇಲಾಖೆ ಇವರಿಗೆ ಸಲ್ಲಿಸತಕ್ಕದ್ದು ಎಂದು ಆದೇಶಹೊರಡಿಸಿದೆ

Related News

spot_img

Revenue Alerts

spot_img

News

spot_img