#Complaint # election officials #against Congress #MLA #HC Balakrishna
ಬೆಂಗಳೂರು;ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್(Congress) ಪಕ್ಷಕ್ಕೆ ಹೆಚ್ಚಿನ ಸ್ಥಾನಗಳು ಬರದಿದ್ದರೆ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ರದ್ದು ಮಾಡುತ್ತೇವೆ ಎಂದು ಮತದಾರರಿಗೆ ಬ್ಲ್ಯಾಕ್ ಮೇಲ್ ಮಾಡಿರುವ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ(H.C.Balkrishna) ವಿರುದ್ದ ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಾದ(State Chief Electoral Officer) ಮನೋಜ್ ಕುಮಾರ್ ಮೀನಾ(Manojkumar Meena) ಅವರಿಗೆ ಜೆಡಿಎಸ್ ವತಿಯಿಂದ ದೂರು ನೀಡಲಾಗಿದೆ.ಇದು ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಪ್ರಕರಣವಾಗಿದೆ ಈ ಹಿನ್ನೆಲೆಯಲ್ಲಿ ಬಾಲಕೃಷ್ಣ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡಲಾಗಿದೆ.H. C.ಬಾಲಕೃಷ್ಣ ಅವರ ಹೇಳಿಕೆಯು ನಮ್ಮ ಸಂವಿಧಾನ ಮತ್ತು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ(Representation of the People Act) ಸಂಪೂರ್ಣ ಉಲ್ಲಂಘನೆಯಾಗಿದೆ. ನಾನು ಮುಖ್ಯ ಚುನಾವಣಾಧಿಕಾರಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ನ ಮಾನ್ಯತೆಯನ್ನು ರದ್ದು ಮಾಡಲು ಒತ್ತಾಯಿಸಿದ್ದೇವೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಅವರು ಸೇರಿದಂತೆ ಪಕ್ಷದ ಉನ್ನತ ನಾಯಕತ್ವದ ಪೂರ್ವಾನುಮತಿ ಇಲ್ಲದೆ ಅವರು ಯಾವುದೇ ಹೇಳಿಕೆ ನೀಡಿರುವ ಸಾಧ್ಯತೆ ಇಲ್ಲ. ಇಂತಹ ವರ್ತನೆಯನ್ನು ಜೆಡಿಎಸ್ ಮತ್ತು ಕರ್ನಾಟಕದ ಜನತೆ ಸಹಿಸುವುದಿಲ್ಲ ಎಂದು ಅವರು ಆರೋಪ ಮಾಡಿದರು. ಈ ವೇಳೆ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರಾದ ಸುರೇಶ್ ಬಾಬು, ಕರೆಮ್ಮ ನಾಯಕ್, ಹೆಚ್.ಟಿ.ಮಂಜುನಾಥ, ಹರೀಶ್ ಗೌಡ, ಸ್ವರೂಪ್ ಪ್ರಕಾಶ್, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ, ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಅಭ್ಯರ್ಥಿ ಎ.ಪಿ.ರಂಗನಾಥ್ ಸೇರಿ ಅನೇಕ ನಾಯಕರು ನಿಯೋಗದಲ್ಲಿ ಇದ್ದರು.