27.5 C
Bengaluru
Wednesday, November 6, 2024

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳಿಸಿ: ಟಿ.ಬಿ. ಜಯಚಂದ್ರ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನ ಮುಂದಿನ ಒಂದು ವರ್ಷದಲ್ಲಿ ಅನುಷ್ಠಾನಗೊಳಿಸಿ ರೈತರಿಗೆ ನೀರು ನೀಡಬೇಕೆಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದ್ದಾರೆ  ವಿಧಾನಸೌಧದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣ ಚಿತ್ತಯ್ಯ ಹಾಗೂ ಕಾನೂನು ಇಲಾಖೆ ಕಾರ್ಯದರ್ಶಿ ಜಗದೀಶ್ ಸೇರಿದಂತೆ ಜಲಸಂಪನ್ನೂಲ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ ನೀಡುವ ಸಂಬಂಧ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರು ಆಗಿರುವ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಆ ಭಾಗದ ಶಾಸಕರ ಹಾಗೂ ಸಂಸದರ ಸಭೆಯನ್ನ ಅತಿ ಶೀಘ್ರದಲ್ಲಿ ಕರೆಯುವುದಾಗಿ ಇದೇ ವೇಳೆ ಜಯಚಂದ್ರ ಅವರು ತಿಳಿಸಿದರು. ಅಷ್ಟೇ ಅಲ್ಲ ಕೇಂದ್ರ ಸಚಿವರಾಗಿರುವ ಶೋಭಾ ಕರಂದ್ಲಾಜೆ ಹಾಗೂ ನಾರಾಯಣಸ್ವಾಮಿ ಅವರ ಜೊತೆ ತಮ್ಮ ನೇತೃತ್ವದಲ್ಲಿ ದೆಹಲಿಯಲ್ಲಿ ಸಭೆ ನಡೆಸುವುದಾಗಿ ಜಯಚಂದ್ರ ಅವರು ತಿಳಿಸಿದರು .

ಈ ತಿಂಗಳ 18ರಿಂದ ಲೋಕಸಭೆ ಅಧಿವೇಶನ ನಡೆಯಲಿದ್ದು ಆ ಸಮಯದಲ್ಲಿ ತಾವು ದೆಹಲಿಗೆ ತೆರಳಿ ಕೇಂದ್ರ ಜಲಸಂಪನ್ಮೂಲ ಹಾಗೂ ಕೇಂದ್ರ ಹಣಕಾಸು ಸಚಿವರನ್ನು ಸಹ ಭೇಟಿಯಾಗಿ ಭದ್ರಾ ಮೇಲ್ದಂಡೆ ಯೋಜನೆಗೆ ಇರುವ ತೊಡಕುಗಳನ್ನ ನಿವಾರಿಸಿ ಹಣ ನೀಡುವಂತೆ ಒತ್ತಾಯಿಸುವುದಾಗಿ ಜಯಚಂದ್ರ ಅವರು ತಿಳಿಸಿದರು.21473 ಕೋಟಿ ವೆಚ್ಚದ ಈ ಕೇಂದ್ರದ ಯೋಜನೆಗೆ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ 5300 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದು ಕೇಂದ್ರ ಜಲಶಕ್ತಿ ಹಾಗೂ ಕೇಂದ್ರ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ ವಾರ ಸಭೆ ನಡೆಸಿದ್ದಾರೆ ಎಂದು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣ ಚಿತ್ತಯ್ಯ ಅವರು ಸಭೆಯಲ್ಲಿ ವಿವರಿಸಿದರು.ಪ್ರಧಾನಮಂತ್ರಿಯವರ ಸಭೆಯ ವಿವರಗಳ ಮಾಹಿತಿ ಇಂದು ಸಂಜೆ ಗೊತ್ತಾಗುತ್ತದೆ ಎಂದು ಇದೇ ವೇಳೆ ಅವರು ತಿಳಿಸಿದರು.ಈ ಯೋಜನೆಗೆ ರಾಜ್ಯ ಸರ್ಕಾರ ಕಳೆದ ಬಜೆಟ್ ನಲ್ಲಿ 2500 ಕೋಟಿ ರೂಪಾಯಿ ತೆಗೆದಿರಿಸಿದೆ .

Related News

spot_img

Revenue Alerts

spot_img

News

spot_img