ಕೆ.ಐ.ಎ.ಡಿ.ಬಿ ಭೂ ಸ್ವಾಧೀನ ಮಾಡಿಕೊಳ್ಳುವಜಾಗದಲ್ಲಿ ಶೇ.15 ರಷ್ಟು ಭೂಮಿಯನ್ನು ಆಸ್ಪತ್ರೆ, ಶಾಲೆ, ವಸತಿಸೇರಿದಂತೆ ಇನ್ನಿತರೆ ಮೂಲ ಸೌಕರ್ಯಕ್ಕೆ ಬಳಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಹೇಳಿದ್ದಾರೆ.ಮಂಗಳವಾರ ವಿಧಾನಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಕೇಳಿದ ಪ್ರಶ್ನೆಗೆ ಸಚಿವರು ಇದಕ್ಕೆ ಉತ್ತರಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕೋದ್ಯಮಿಗಳಿಗೆ ಭೂಮಿ ಹಂಚಿಕೆ ಮಾಡುವಾಗ ಉದ್ಯಮ ಹಾಗೂ ಕೈಗಾರಿಕೆಗಳಲ್ಲಿ ಕೆಲಸ ಮಾಡುವವರು ಹತ್ತಿರದಲ್ಲೇ ವಾಸ ಮಾಡಲು ಅಗತ್ಯವಾದ ವಸತಿ ನಿರ್ಮಿಸಲು, ಅದಕ್ಕೆ ಪೂರಕವಾಗಿ ಆಸ್ಪತ್ರೆ, ಶಿಕ್ಷಣ ಸಂಸ್ಥೆ ಸೇರಿ ಇತರ ಸೌಲಭ್ಯಗಳನ್ನು ಕಲ್ಪಿಸಲು ಮಂಜೂರಾದ ಭೂಮಿಯಲ್ಲಿ ಶೇ.15ರಷ್ಟು ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು
ಅದೇ ರೀತಿ ಬ್ರಿಗೆಡ್ ಸಂಸ್ಥೆಗೆ ತಲಾ 25 ಎಕರೆಯಂತೆ ಎರಡು ಬಾರಿ ಭೂಮಿ ನೀಡಲಾಗಿದೆ. 2002ರಲ್ಲಿ ಭೂಮಿ ನೀಡಲಾಗಿತ್ತು. ಅದರಲ್ಲಿ ಶೇ.15ರಷ್ಟು ಭೂಮಿಯನ್ನು ವಸತಿ, ಆಸ್ಪತ್ರೆ, ಶಾಲೆ ಕಟ್ಟಲು ಬಳಕೆ ಮಾಡಿಕೊಳ್ಳುತ್ತಿದ್ದು, 11 ಟವರ್ ನಿರ್ಮಿಸುವ ಗುರಿ ಇದೆ. ಈಗಾಗಲೇ ಏಳು ಟವರ್ ನಿರ್ಮಿಸಲಾಗಿದೆ.ಆ ಭೂಮಿಯಲ್ಲಿ ಬಡವರಿಗೆ ಮನೆ ನಿರ್ಮಿಸಿಕೊಡಲಾಗುವುದು ಎಂದು ನಿರಾಣಿ ತಿಳಿಸಿದರು.ವಿಧಾನ ಪರಿಷತ್‍ನಲ್ಲಿ ಮರಿತಿಬ್ಬೇಗೌಡ, ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಬಡವರಿಗೆ ಮನೆ ಕಟ್ಟಿಕೊಡಲು ದೇವನಹಳ್ಳಿಯ ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‍ನಲ್ಲಿ ಬ್ರಿಗೆಡ್ ರಿಯಲ್ ಎಸ್ಟೇಟ್ ಸಂಸ್ಥೆಗೆ ಎರಡು ಹಂತದಲ್ಲಿ ಹತ್ತಾರು ಎಕರೆಯನ್ನು ಕೆಐಎಡಿಬಿಯಿಂದ ನೀಡಲಾಗಿದೆ.ಆದರಲ್ಲಿ ಬಡವರಿಗೆ ಮನೆ ಕಟ್ಟಿಕೊಡುವುದಾಗಿ ಹೇಳಲಾಗಿತ್ತು. ಆದರೆ ಆ ನಿಯಮ ಪಾಲನೆಯಾಗಿಲ್ಲ. ಬ್ರಿಗೆಡ್ ಸಂಸ್ಥೆಗೆ ಭೂಮಿ ಕೊಡುವ ಸಲುವಾಗಿ ಅರ್ಹರಾದ ಹಲವು ಕೈಗಾರಿಕೋದ್ಯಮಿಗಳಿಗೆ ಭೂಮಿ ನೀಡಲಾಗದೆ ಅನ್ಯಾಯ ಮಾಡಲಾಗಿದೆ. ಸರ್ಕಾರಕ್ಕೂ ನಷ್ಟವಾಗಿದೆ ಎಂದರು. ಇನ್ನು ಕೌಶಲ್ಯ ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವದಲ್ಲಿ ಬ್ರಿಗೇಡ್ ಗ್ರೂಪ್ ಗೆ ಭೂಮಿ ನೀಡಲಾಗಿದ್ದು, ಅದಕ್ಕೆ ಸರಕಾರ ಹಣವನ್ನು ಕೂಡ ಪಡೆದಿದ್ದು, ಉಚಿತವಾಗಿ ನೀಡಿಲ್ಲ. ಹೀಗಾಗಿ ಇಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲಎಂದು ನಿರಾಣಿ ಸ್ಪಷ್ಟಪಡಿಸಿದರು.