ಬೆಂಗಳೂರು;ರಾಜ್ಯದಲ್ಲಿ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡುವ ಕಾಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಐಸಿಸಿ ಪ್ರಕಟಿಸಿದೆ.ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆಗೊಳಿಸಿದೆ.ಪದವೀಧರ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನವೆಂಬರ್ 6 ಕೊನೆಯ ದಿನವಾಗಿದೆ.ನವೆಂಬರ್ 23ರಂದು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಲಿದೆ.ಆಕ್ಷೇಪಣೆ ಸಲ್ಲಿಕೆ ಮಾಡಲು ಡಿಸೆಂಬರ್ 9 ಕೊನೆಯ ದಿನವಾಗಿದೆ. ಡಿಸೆಂಬರ್ 30ರಂದು ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಬಳಿಕವೂ ನೋಂದಣಿಗೆ ಅವಕಾಶ ಇರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವಿಧಾನ ಪರಿಷತ್ತಿನ ಎರಡು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮುಂದಿನ ವರ್ಷದ ಮೇ-ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಅಭ್ಯರ್ಥಿಗಳು ಪದವೀಧರರನ್ನು ನೋಂದಣಿ ಮಾಡಿ ಸಲು ಮತ್ತು ಶಿಕ್ಷಕರನ್ನು ಸೆಳೆಯ ಸಮಯಾವಕಾಶ ಬೇಕಾಗಿರುವುದ ರಿಂದ ಎಂಟು ತಿಂಗಳು ಮೊದಲು ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು ಪದವೀಧರರ ಕ್ಷೇತ್ರ: ರಾಮೋಜಿ ಗೌಡ
ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ
ನೈರುತ್ಯ ಶಿಕ್ಷಕರ ಕ್ಷೇತ್ರ: ಕೆ.ಕೆ ಮಂಜುನಾಥ್
ಆಗ್ನೇಯ ಶಿಕ್ಷಕರ ಕ್ಷೇತ್ರ: ಟಿ.ಟಿ ಶ್ರೀನಿವಾಸ
ಈಶಾನ್ಯ ಪದವೀಧರರ ಕ್ಷೇತ್ರ: ಡಾ ಚಂದ್ರಶೇಖರ್ ಪಾಟೀಲ