ಬೆಂಗಳೂರು, ಮೇ. 13 : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ 2023ರ ಮತ ಎಣಿಕೆ ಮುಗಿಯುವ ಹಂತ ತಲುಪಿದೆ. ಆರಂಭದಿಂದಲೂ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಕಾಂಗ್ರೆಸ್ 124 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಸಾಧಿಸುವತ್ತ ಸಾಗಿದ್ದು, ಕೈ ಪಕ್ಷವೇ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಹಾಗೂ ಜಾಗತಿಕ ಮಟ್ಟದಲ್ಲಿ ಗೂಗಲ್ ಸರ್ಚ್‌ನಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಗಳು ಯಾರಿರಬಹುದು ಎಂದು ಹುಡುಕಾಟ ನಡೆಯುತ್ತಿದೆ.
ಪ್ರತಿಯೊಬ್ಬರು ಕಾಂಗ್ರೆಸ್ ಪಕ್ಷದಲ್ಲಿ ಯಾರು ಮುಖ್ಯಮಂತ್ರಿ ಯಾಗುತ್ತಾರೆ ಎಂದು ಗೂಗಲ್ ನಲ್ಲಿ ಸರ್ಚ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿಯಾಗಬಹುದು ಎಂಬ ಕುತೂಹಲ ಜನರಲ್ಲಿ ಮೂಡಿದೆ. ಹೀಗಾಗಿ ಎಲ್ಲರೂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಲ್ಲಿ ಯಾರು ಸಿಎಂ ಆಗುತ್ತಾರೆ ಎಂದು ಗೂಗಲ್ ನಲ್ಲಿ ಸರ್ಚ್ ಮಾಡುತ್ತಿದ್ದಾರೆ. ಗೂಗಲ್ ಸರ್ಚ್ ನಲ್ಲಿ ಇಂದು ಟ್ರೆಂಡಿಂಗ್ ನಲ್ಲಿ ಇವರಿಬ್ಬರ ಹೆಸರೇ ಇದೆ.
ಇತ್ತೀಚಿನ ವರದಿಗಳು ಬಂದಾಗ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 124 ಕ್ಷೇತ್ರಗಳಲ್ಲಿ ಮುನ್ನ8 ಡೆ ಸಾಧಿಸಿದ್ದು, ಬಿಜೆಪಿ 68 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಅಧಿಕಾರದ ಗದ್ದುಗೆ ಏರುವ ಕನಸು ಕಾಣುತ್ತಿರುವ ಜೆಡಿಎಸ್ 25 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, 6 ಕ್ಷೇತ್ರಗಳಲ್ಲಿ ಇತರರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ಈಗಾಗಲೇ ಎಕ್ಸಿಟ್ ಪೋಲ್ ಗಳಲ್ಲಿ ಕಾಂಗ್ರೆಸ್ ಗೆಲ್ಲಲ್ಲಿದೆ ಎಂದು ಹೇಳಲಾಗಿತ್ತು. ಇದೀಗ ಮತ ಎಣಿಕೆಯಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.