23.9 C
Bengaluru
Sunday, December 22, 2024

ಇಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

#Congress #Legislature Party #meeting today

ಬೆಂಗಳೂರು;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಸಂಜೆ ಬೆಳಗಾವಿಯ 6:30ಕ್ಕೆ ಫೇರ್ ಫೀಲ್ಡ್ ಮ್ಯಾರಿಯಟ್ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.ಈ ಸಭೆಯಲ್ಲಿ, ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿ ಪ್ರತಿಪಕ್ಷಗಳನ್ನು ಎದುರಿಸುವ ಬಗ್ಗೆ ಸಿಎಂ ಚರ್ಚಿಸಲಿದ್ದಾರೆಂದು ತಿಳಿದು ಬಂದಿದೆ. ಅಲ್ಲದೇ ನಿಗಮ ಮಂಡಳಿ ನೇಮಕಾತಿ ಕುರಿತೂ ಶಾಸಕರು-ಸಚಿವರೊಂದಿಗೆ ಸಿದ್ದರಾಮಯ್ಯ ಅವರು ಮಹತ್ವದ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವೆ ಸಭೆಯಲ್ಲಿ, ಸದನ ದಲ್ಲಿ ಶಾಸಕರು ಸದನಕ್ಕೆ ಸರಿಯಾಗಿ ಹಾಜರಾಗಬೇಕು. ಇದರೊಂದಿಗೆ ಪ್ರತಿಪಕ್ಷಗಳ ಆರೋಪ ಗಳಿಗೆ ಸಮರ್ಥವಾಗಿ ಪ್ರತಿಕ್ರಿಯಿಸಬೇಕು ಎಂದು ಸೂಚನೆ ನೀಡುವ ಸಾಧ್ಯ ತೆಯಿದೆ. ಇದರೊಂದಿಗೆ ಬಸವರಾಜ ರಾಯರಡ್ಡಿ ಸೇರಿದಂತೆ ಕೆಲವರು ಸ್ವಪಕ್ಷೀಯರ ವಿರುದ್ಧವೇ ಮಾತನಾಡುತ್ತಿದ್ದಾರೆ. ಈ ರೀತಿಯ ನಡೆ ಸರಿಯಲ್ಲ. ಆದ್ದರಿಂದ ಯಾವೊಬ್ಬ ಶಾಸಕರು ಸರಕಾರದ ವಿರುದ್ಧ ಮಾತನಾಡಬಾರದು ಎನ್ನುವ ಸ್ಪಷ್ಟ ಸೂಚನೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Related News

spot_img

Revenue Alerts

spot_img

News

spot_img