ಬೆಂಗಳೂರು ಮೇ2;ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಇಂದು (ಮಂಗಳವಾರ) ಬಿಡುಗಡೆಯಾಗಿದೆ. ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ ಜಿ ಪರಮೇಶ್ವರ್ ಸೇರಿ ಹಲವರು ಭಾಗಿಯಾಗಿದ್ದರು.
ಕಾಂಗ್ರೆಸ್ ಪ್ರಣಾಳಿಕೆಯ ಮುಖ್ಯ ಅಂಶಗಳು
*ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್,
*ಅನ್ನ ಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ,
*ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ,
*ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂ., ಡಿಪ್ಲೊಮೊ ಪದವೀಧರರಿಗೆ 1,500 ರೂ,
*ಸರ್ಕಾರದಲ್ಲಿ ಒಂದು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ನೌಕರರಿಗೆ ಖಾಯಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರ ಖಾಯಂ,
*ನೇಕಾರರ ಮಗ್ಗ ಆಧುನಿಕರಣಕ್ಕಾಗಿ ವರ್ಷಕ್ಕೆ 30 ಸಾವಿರ ಅನುದಾನ ಮಂಗಳಮುಖಿ ಮಂಡಳಿ ಸ್ಥಾಪನೆ ವಾರ್ಷಿಕ 100 ಕೋಟಿ ಅನುದಾನ ಮತ್ತು ಅದರ ಮೂಲಕ ಮೂರು ಲಕ್ಷದವರೆಗೆ ಸ್ವಉದ್ಯೋಗಕ್ಕೆ ಅನುದಾನ
* ಬೀದಿ ಬದಿ ವ್ಯಾಪಾರಿಗಳಿಗೆ ಒಂದು ಬಾರಿಯ ನೆರವಿನ ರೂಪದಲ್ಲಿ 20,000 ಅನುದಾನ ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಗೆ 3 ಸಾವಿರ ಕೋಟಿ ಹೂಡಿಕೆ
*ರೈತರಿಗೆ ಬಡ್ಡಿ ರಹಿತ ಸಾಲ 3 ಲಕ್ಷದಿಂದ 10 ಲಕ್ಷದವರೆಗೆ ವಿಸ್ತರಣೆ
*ಗ್ರಾಮೀಣ ಕೃಷಿಕ ಮಹಿಳೆಯರಿಗೆ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲ
*ಪಶುಭಾಗ್ಯ- ಹಸು/ ಎಮ್ಮೆ ಖರೀದಿಗೆ ಬಡ್ಡಿರಹಿತ 3 ಲಕ್ಷ ಸಾಲ
*ಮೈಸೂರಿನಲ್ಲಿ 500 ಕೋಟಿ ಬಜೆಟ್‌ನೊಂದಿಗೆ ವಿಶ್ವದರ್ಜೆಯ ಡಾ. ರಾಜ್ ಕುಮಾರ್ ಫಿಲ್ಮ್ ಸಿಟಿ ನಿರ್ಮಾಣ
*ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ವಿಶ್ವವಿದ್ಯಾಲಯ ಮತ್ತು ಕ್ರೀಡಾ ಸಂಕೀರ್ಣ ಸ್ಥಾಪನೆ
*ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ ರೂ 5 ಸಾವಿರ ಕೋಟಿ ಮೀಸಲು
*ಅಂಗನವಾಡಿ ಕಾರ್ಯಕರ್ತೆಯರ ವೇತನ 11,500ರಿಂದ 15 ಸಾವಿರಕ್ಕೆ ಹೆಚ್ಚಳ,
* ಆಶಾ ಕಾರ್ಯಕರ್ತೆಯರ ಗೌರವಧನ 8 ಸಾವಿರ ರೂ.ಗೆ ಹೆಚ್ಚಳ,
*ಬಿಸಿಯೂಟ ನೌಕರರ ಮಾಸಿಕ ಗೌರವಧನ 6 ಸಾವಿರ ರೂ.ಗೆ ಹೆಚ್ಚಳ,
*ರಾತ್ರಿ ಪಾಳಿಯ ಪೊಲೀಸ್ ಸಿಬ್ಬಂದಿಗೆ 5 ಸಾವಿರ ರೂ. ವಿಶೇಷ ಭತ್ಯೆ, ಎಲ್ಲಾ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ವೇತನ ಹೆಚ್ಚುವರಿ ಪಾವತಿ,
*ಬಿಬಿಎಂಪಿ ನಿರ್ವಹಣೆಗಾಗಿಯೇ ಸಮಗ್ರ ಶಾಸನ ಜಾರಿ
*NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ, ಸರ್ಕಾರದಿಂದಲೇ ಮನೆಗಳ ನಿರ್ಮಾಣ,
*ಹಿರಿಯ ನಾಗರಿಕರಿಗೆ ಎರಡು ವರ್ಷಕ್ಕೊಮ್ಮೆ ರಾಜ್ಯದ 15 ದೇಶದ 10 ಪವಿತ್ರ ಸ್ಥಳಗಳಿಗೆ ಉಚಿತ ಪ್ರವಾಸ, ಕಾಶಿ, ಮಥುರ, ಕೈಲಾಸ, ಮಾನಸ ಸರೋವರ ಯಾತ್ರೆಯ ಸಬ್ಸಿಡಿ ಹೆಚ್ಚಳ,
*ಪತ್ರಕರ್ತರ ಕಲ್ಯಾಣ ನಿಧಿ ಸ್ಥಾಪನೆಗೆ ರೂ 500 ಕೋಟಿ ಮೀಸಲು ಅನಿವಾಸಿ ಕನ್ನಡಿಗರ ವ್ಯವಹಾರಕ್ಕಾಗಿ ಪ್ರತ್ಯೇಕ ಸಚಿವಾಲಯ
*ಅನಿವಾಸಿ ಕನ್ನಡಿಗರು ರಾಜ್ಯದಲ್ಲಿ ಉದ್ಯಮ ನಡೆಸಲು ಉತ್ತೇಜನ ರೂ 1,000 ಕೋಟಿ ಆವರ್ತನ ನಿಧಿ
*ವಿಧವಾ ಪಿಂಚಣಿ 2500 ರೂ ಗೆ ಹೆಚ್ಚಳ
*ಬಿಎಂಟಿಸಿ ಬಸ್ ಗಳ ಸಂಖ್ಯೆ 10,000 ಕ್ಕೆ ಹೆಚ್ಚಳ
*ಕೆಎಸ್ ಆರ್ ಟಿ ಸಿ ಬಸ್ ಗಳ ಸಂಖ್ಯೆ 15,000 ಕ್ಕೆ ಹೆಚ್ಚಳ
*ಮೇಕೆದಾಟು ಯೋಜನೆಗೆ 9000 ಕೋಟಿ ಭರವಸೆ
*ಪ್ರತಿ ಜಿಲ್ಲೆಗೆ ಒಂದು ರೈತ ಮಾಲ್ ಆರಂಭ
*ಸಾವಯವ ಕೃಷಿ ಯೋಜನೆಗೆ 2500ಕೋಟಿ ಹೂಡಿಕೆ
*ಹನಿ,ತುಂತುರು ನೀರಾವರಿಗೆ ೧೦೦ ರಷ್ಟು ಸಬ್ಸಿಡಿ
*ಸೌರ ಪಂಪ್ ಸೆಟ್ ಯೋಜನೆಗೆ ಸಬ್ಸಿಡಿ
*ಗದಗದಲ್ಲಿ ಹತ್ತಿ ರಫ್ತು ಸಂಸ್ಕರಣ ಕೇಂದ್ರ
*ಸಿಂಧನೂರಿನಲ್ಲಿ ಅಕ್ಕಿ ಸಂಸ್ಕರಣ ಕೇಂದ್ರ
*ಬೆಳಗಾವಿ, ಬಾಗಲಕೋಟೆ, ಮಂಡ್ಯದಲ್ಲಿ ಎಥೆನಾಲ್ ಘಟಕ
*ಕೊಡಗು,ಚಿಕ್ಕಮಗಳೂರಿನಲ್ಲಿ ಕಾಳು ಮೆಣಸು ಸಂಸ್ಕರಣೆ