ಬೆಂಗಳೂರು;ರಾಜ್ಯ ಸರ್ಕಾರ ಇಂದು ವಿಧಾನಸೌಧದ ಮೆಟ್ಟಿಲಿನಲ್ಲಿ ಪ್ರಜಾಪ್ರಭುತ್ವ ದಿನದ ಅಂಗವಾಗಿ ‘ಸಂವಿಧಾನ ಪೀಠಿಕೆ’ ಓದು ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಎಲ್ಲಾ ಸಚಿವರು ಮತ್ತು ಶಾಸಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ‘ಸಂವಿಧಾನದ ಪೀಠಿಕೆ’ ಓದುವ ಮೂಲಕ ಸಿಎಂ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಂದಿನಿಂದ ಎಲ್ಲಾ ಸರ್ಕಾರಿ ಸಮಾರಂಭಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ‘ಸಂವಿಧಾನ ಪೀಠಿಕೆ’ ಓದುವುದು ಕಡ್ಡಾಯವಾಗಲಿದೆ.ಸರ್ಕಾರದ ಆದೇಶ ಶಾಲೆ, ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆ ಓದಬೇಕು ಅನ್ನುವ ನಿಯಮವನ್ನು ಸರ್ಕಾರ ಕಡ್ಡಾಯ ಮಾಡಿ ಆದೇಶಿಸಿದೆ.
ಇಂದಿನಿಂದ (ಸೆಪ್ಟೆಂಬರ್ 15) ಈ ಆದೇಶ ಜಾರಿಯಾಗಲಿದ್ದು, ಸರ್ಕಾರಿ ಕಚೇರಿಗಳಲ್ಲಿ ನಡೆಸುವ ಸಭೆ, ಸಮಾರಂಭಕ್ಕೂ ಮುನ್ನ ಪೀಠಿಕೆ ಓದಲೇಬೇಕು ಎಂದು ಕಡ್ಡಾಯಗೊಳಿಸಲಾಗಿದೆ.ಸೆಪ್ಟೆಂಬರ್ 15 ರಂದು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದು, ಸಂವಿಧಾನ ಪೀಠಿಕೆ ಓದುವ ಮೂಲಕ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಅವರು ಚಾಲನೆ ನೀಡಿದರು.
ರಾಜ್ಯ ಸರ್ಕಾರ ಈಗಾಗಲೇ ಸಂವಿಧಾನ ಪೀಠಿಕೆ ಓದು ಶಾಲಾ ಕಾಲೇಜುಗಳಲ್ಲಿ ಕಡ್ಡಾಯಗೊಳಿಸಿತ್ತು. ಅಲ್ಲದೇ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದು ಪರಿಪಾಠವನ್ನು ಸೆ.15ರಿಂದ ಆರಂಭಿಸುವುದಾಗಿ ತಿಳಿಸಿತ್ತು. ಅದರಂತೆ ಇಂದಿನಿಂದ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಓದು ಆರಂಭಗೊಳ್ಳಲಿದೆ.. ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಹೇಳಿರುವಂತಹ ಸಂವಿಧಾನ ಪೀಠಿಕೆ ಅದರ ಆತ್ಮವಾಗಿದೆ. ಹೀಗಾಗಿ ಎಲ್ಲ ಕಾಲೇಜುಗಳ ಪ್ರಾಂಶುಪಾಲರು ಕಾನೂನು ಇಲಾಖೆಯ ಕೇಂದ್ರದಿಂದ ಸಂವಿಧಾನ ಪೀಠಿಕೆಯನ್ನು ಖರೀದಿಸಿ ಕಾಲೇಜಿನ ಫಲಕದಲ್ಲಿ ಪ್ರಕಟಿಸಬೇಕು ಎಂದು ಹೇಳಿತ್ತು.ಕೇವಲ ಶಾಲಾ ಕಾಲೇಜುಗಳಿಗೆ ಮಾತ್ರವಲ್ಲದೆ ಸರ್ಕಾರಿ ಕಚೇರಿಗಳಲ್ಲೂ ಇದು ಅನ್ವಯವಾಗಲಿದೆ. ಸಿಎಂ ಕಚೇರಿಯಲ್ಲೂ ಇದನ್ನು ಓದಬೇಕು. ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿಗಳಲ್ಲೂ ಸಂವಿಧಾನ ಪೀಠಿಕೆಯನ್ನು ಜಾರಿಗೊಳಿಸಲಾಗುತ್ತಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆ ಫೋಟೋ ಹಾಕಲು ಸರ್ಕಾರ ಸೂಚಿಸಿರುವುದಾಗಿ ತಿಳಿಸಿದೆ.