Revenue Facts

ಎಂಪಿ ಚುನಾವಣೆಗೆ 28 ಕ್ಷೇತ್ರದಲ್ಲಿ ಸ್ಪರ್ಧೆ;HDK

ಬೆಂಗಳೂರು;ಎಂಪಿ ಚುನಾವಣೆಗೆ 28 ಕ್ಷೇತ್ರದಲ್ಲೂ ಅಭ್ಯರ್ಥಿ ಹಾಕಬೇಕು ಎಂಬ ಅಭಿಪ್ರಾಯ ಇದೆ. ಸ್ವತಂತ್ರವಾಗಿ ಚುನಾವಣೆ ಎದುರಿಸಬೇಕು ಎಂದುಕೊಂಡಿದ್ದೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.ಮಂಡ್ಯದಲ್ಲಿ ಮಾತನಾಡಿದ ಅವರು, ನಾನು ಮೈತ್ರಿ ಮಾಡಿಕೊಂಡರೆ, ಮೈತ್ರಿ ಮಾಡಿಕೊಳ್ಳದ ಕ್ಷೇತ್ರದಲ್ಲಿ ಕಾರ್ಯಕರ್ತರು ಏನು ಮಾಡ್ತಾರೆ. ಕಳೆದ ಬಾರಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಏನು ಅನುಕೂಲಾ ಆಯ್ತು. 28 ಕ್ಷೇತ್ರದಲ್ಲಿ ಗೆಲ್ಲುತ್ತೇವೆಂದು ನಾನು ಹೇಳಲ್ಲ. ನಾಲ್ಕೈದು ಕ್ಷೇತ್ರಗಳಲ್ಲಿ ನಾವು ಗೆಲ್ಲಿವ ವಿಶ್ವಾಸ ಇದೆ. 28 ಕ್ಷೇತ್ರಗಳಲ್ಲಿ ಕಾರ್ಯಕರ್ತರನ್ನು ಉಳಿಸಿಕೊಳ್ಳಲು ಕೆಲಸ ಮಾಡ್ತೀವಿ ಎಂದರು.ಮುಂದಿನ ಐದು ವರ್ಷ ನಿಖಿಲ್ ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ.ನಿಖಿಲ್ ಗೆ ರಾಜಕೀಯದ ಸಹವಾಸ ಹೋಗಬೇಡ ಎಂದು ಸಲಹೆ ನೀಡಿದ್ದೇನೆ ಮುಂದಿನ ಐದು ವರ್ಷ ನಿಖಿಲ್ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ದಯವಿಟ್ಟು ರಾಜಕೀಯ ಜಂಗುಳಿ ಬಿಟ್ಟು ಕಲಾವಿದನಾಗಿ ಬದುಕು ರೂಪಿಸಿಕೊಳ್ಳಲು ನಿಖಿಲ್ ಗೆ ಹೇಳಿದ್ದೇನೆ. ಈಗಾಗಲೇ ಮೂರು ಚಿತ್ರಗಳನ್ನು ನಿರ್ಮಾಣ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ಸಿನಿಮಾ ಮಾಡಲು ನಿಖಿಲ್ ಮುಖ ಮಾಡಿದ್ದಾರೆ ಎಂದರು.ನಿಖಿಲ್ ಚುನಾವಣೆಗೆ ನಿಲ್ಲುವ ಪ್ರಶ್ನೆ ಇಲ್ಲ. ಈಗಾಗಲೇ ಎರಡು ಬಾರಿ ನಿಖಿಲ್ ಸೋತಿದ್ದಾನೆ. ಮಂಡ್ಯ ಎಂಪಿ ಚುನಾವಣಗೆ ನಿಲ್ಲೂವಾಗಲೂ ಬೇಡಾ ಅಂದಿದ್ದೆ. ನಿಖಿಲ್ ಮಂಡ್ಯದಲ್ಲಿ ನಿಲ್ಲಲು ತಯಾರು ಇರಲಿಲ್ಲ. ಶಾಸಕರು ಹಾಗೂ ಕಾರ್ಯಕರ್ತರ ಒತ್ತಡದಿಂದ ಚುನಾವಣೆಗೆ ತಲೆ ಕೊಟ್ಟ. ಸೋಲು ಗೆಲುವು ಇರುತ್ತೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ. ದೇವೇಗೌಡರು, ನಾನು ಎಲ್ಲರೂ ಸೋತಿದ್ದೇವೆ. ಜನಾಭಿಪ್ರಾಯ ಏನು ಇದೆ ಅದಕ್ಕೆ ತಲೆಬಾಗಬೇಕು. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಮಾತನಾಡಿ, ಕಾವೇರಿ ವಿಚಾರದಲ್ಲಿ ಸರ್ಕಾರ ಹುಡುಗಾಟಿಕೆ ಬಿಡಬೇಕು. ನಿಮ್ಮ ಗ್ಯಾರಂಟಿ ಜೊತೆಗೆ ರೈತರಿಗೆ 6ನೇ ಗ್ಯಾರಂಟಿ ಕೊಡಿ. ರೈತರಿಗೆ ಬೆಳೆ ಬೆಳೆಯ ಬೇಡಿ ಪರಿಹಾರ ಕೊಡ್ತೇವೆ ಅಂತ ಘೋಷಣೆ ಮಾಡಿ. ಸಾಲ ಸೋಲ ಮಾಡಿ ರೈತರು ಆತ್ಮಹತ್ಯೆ ಮಾಡಿಕೊಳ್ಳೋದು ತಪ್ಪುತ್ತೆ ಎಂದು ಒತ್ತಾಯಿಸಿದರು.

Exit mobile version