#BBMP #Lokayukta #Curruption #Raid
ಬೆಂಗಳೂರು,ಆ. 03: ರಾಜಧಾನಿ ಬೆಂಗಳೂರಿನ ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದ್ದಾರೆ. ನಿನ್ನೆಯಷ್ಟೆ ಬನಶಂಕರಿಯಲ್ಲಿ ಬಿಬಿಎಂಪಿ ಕಂದಾಯ ವಿಭಾಗದ ಕಚೇರಿಯಲ್ಲಿ ಖಾತೆ ಮ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು ಇಬ್ಬರು ಸರ್ಕಾರಿ ನೌಕರರು ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಕಂದಾಯ ನಿರೀಕ್ಷಕ ಪರಾರಿಯಾಗಿದ್ದ. ಈ ಬೆನ್ನಲ್ಲೇ ಬೆಂಗಳೂರಿನ ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಬನಶಂಕರಿಯ ಬಿಬಿಎಂಪಿ ಕಚೇರಿ ಸೇರಿದಂತೆ ಬೆಂಗಳೂರಿನ ವಾರ್ಡ್ ಗಳಲ್ಲಿರುವ ಬಿಬಿಎಂಪಿ ವಾರ್ಡ್ ಕಚೇರಿಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳು, ವಿಲೇವಾರಿ ಸೇರಿದಂತೆ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.