#CWMA #release #2600cusecs #tamilnadu #nov23
ಬೆಂಗಳೂರು;ಇಂದು ದೆಹಲಿಯಲ್ಲಿ ನಡೆದ ಸಭೆ ಬಳಿಕ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರವು (CWMA) CWRC ಈ ಹಿಂದೆ ನೀಡಿದ್ದ ಆದೇಶವನ್ನು ಮತ್ತೆ ಎತ್ತಿಹಿಡಿದಿದೆ. ಈ ಮೂಲಕ ಕರ್ನಾಟಕಕ್ಕೆ ಪ್ರಾಧಿಕಾರವು ಮತ್ತೊಮ್ಮೆ ಬಿಗ್ ಶಾಕ್ ಕೊಟ್ಟಿದೆ. ಇಂದು ಮಧ್ಯಾಹ್ನ ನಡೆದ CWMA ಸಭೆಯಲ್ಲಿ ತಮಿಳುನಾಡಿಗೆ ನವೆಂಬರ್ 1ರಿಂದ 23ವರೆಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ.ಈ ಮೂಲಕ CWRC ಆದೇಶವನ್ನು CWMA ಎತ್ತಿ ಹಿಡಿದಿದೆ. ಅ.30ರಂದು 15 ದಿನಗಳ ಕಾಲ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶಿಸಿತ್ತು.