28.2 C
Bengaluru
Wednesday, July 3, 2024

ಡಿಸಿಎಂ ಡಿಕೆಶಿಗೆ ಸುಪ್ರೀಂ ನೋಟಿಸ್,ನ.7ರೊಳಗೆ ಪ್ರತಿಕ್ರಿಯೆ ನೀಡಲು ಸೂಚನೆ

#DCM #DKC #insturuted #respond #supremecourt

ನವದೆಹಲಿ: ಭ್ರಷ್ಟಾಚಾರ(Corruption) ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ರಾಜ್ಯ ಹೈಕೋರ್ಟ್(Highcourt) ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹಿಂಪಡೆಯಲು ಸುಪ್ರೀಂ ಕೋರ್ಟ್(Supremecourt) ನಿರಾಕರಿಸಿದೆ.ಡಿ.ಕೆ.ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆ ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು.2017ರಲ್ಲಿ ಡಿ.ಕೆ ಶಿವಕುಮಾರ್ ನಿವಾಸ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಬಳಿಕ ಜಾರಿ ನಿರ್ದೇಶನಾಲಯ(Enforcement Directorate) ಕೂಡ ತನಿಖೆ ಕೈಗೊಂಡಿತ್ತು. ಈ ಸಂದರ್ಭದಲ್ಲಿ ಸುಮಾರು 74 ಕೋಟಿ ರೂ. ಆಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ(CBI) 2019ರ ಸೆಪ್ಟೆಂಬರ್ ನಿಂದ ತನಿಖೆ ಆರಂಭಿಸಿತ್ತು. ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅಂದಿನ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ(BJP) ಸರ್ಕಾರ ಅನುಮತಿ ನೀಡಿತ್ತು.ಸಿಬಿಐ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ತಡೆ ನೀಡಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಹಾಗೂ ಬೇಲಾ.ಎಂ.ತ್ರಿವೇದಿ ಅವರಿದ್ದ ಪೀಠ ಸೋಮವಾರ ವಿಚಾರಣೆ ನಡೆಸಿತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ(case of ill-gotten gains) ರಾಜ್ಯ ಪ್ರತಿಕ್ರಿಯೆ ಸರ್ಕಾರ ಡಿ.ಕೆ ಶಿವಕುಮಾರ್ ಅವರ ವಿರುದ್ಧ ತನಿಖೆ ನೇತೃತ್ವ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಗೆ 2023ರ ಜೂನ್ 12ರಂದು ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು

Related News

spot_img

Revenue Alerts

spot_img

News

spot_img