Revenue Facts

ಮೋಡ ಬಿತ್ತನೆಗೆ ಚಿಂತನೆ ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು; ರಾಜ್ಯದಲ್ಲಿ ಮೋಡ ಬಿತ್ತನೆ ಮಾಡುವ ಬಗ್ಗೆ ಎರಡು- ಮೂರು ದಿನದೊಳಗೆ ಸರ್ಕಾರ ನಿರ್ಧರಿಸಲಿದೆ ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಮಾತನಾಡಿ, ಎರಡು ದಿನಗಳಿಂದ ಬೆಂಗಳೂರು ನಗರ ಹಾಗೂ ಸುತ್ತ-ಮತ್ತೆ ಸುರಿದ ಮಳೆಯಿಂದ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ. ಈ ರೀತಿಯ ವಾತಾವರಣದಲ್ಲಿ ಮೋಡ ಬಿತ್ತನೆ ಮಾಡಿದರೆ ಪರಿಸ್ಥಿತಿ ಸುಧಾರಿಸಬಹುದು ಎನ್ನುವ ನಂಬಿಕೆ ಇದೆ. ಸಚಿವ ಸಂಪುಟ ಸಭೆಯಲ್ಲಿಯೂ ಮೋಡ ಬಿತ್ತನೆ ಹಾಗೂ ಕಾವೇರಿ ನೀರು ಸಂಕಷ್ಟದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.ಪ್ರತಿಪಕ್ಷಗಳು ಹಮ್ಮಿಕೊಂಡಿರುವ ಕಾವೇರಿ ನೀರಿನ ವಿಚಾರವಾಗಿ ಬಂದ್ ಹಾಗೂ ಪ್ರತಿಭಟನೆ ಕುರಿತಾಗಿ ರಾಜ್ಯದ ಹಿತರಕ್ಷಣೆಗೆ ಪ್ರತಿಭಟನೆ ಮಾಡಲು ನಾವು ಸಹಕಾರ ನೀಡುತ್ತೇವೆ.‌ ನೆಲ, ಜಲ, ಭಾಷೆಯನ್ನು ಎಲ್ಲರೂ ಉಳಿಸಿಕೊಳ್ಳಬೇಕು. ಯಾರ ಹೋರಾಟಗಳಿಗೂ ಸರ್ಕಾರ ಅಡ್ಡಿಪಡಿಸುವುದಿಲ್ಲ. ಆದರೆ ಇದರಿಂದ ಜನರಿಗೆ ತೊಂದರೆ ಆಗಬಾರದು, ಶಾಂತಿ ಕಾಪಾಡಬೇಕು, ಹೋರಾಟಗಳಿಗೆ ಸರ್ಕಾರದ ಸಹಕಾರ ಇದ್ದೇ ಇರುತ್ತದೆ.ಸೆ. 26 ರಂದು ಸುಪ್ರೀಂಕೋರ್ಟ್‍ನಲ್ಲಿ ಮತ್ತೊಮ್ಮೆ ಕಾವೇರಿ ವಿಚಾರ ಚರ್ಚೆಗೆ ಬರಲಿದೆ. ಅಲ್ಲಿ ನಾವು ಪ್ರಬಲವಾದ ವಾದ ಮಂಡಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.

Exit mobile version