22.9 C
Bengaluru
Friday, July 5, 2024

ಕರ್ನಾಟಕ ವಿಧಾನಸಭಾ ಚುನಾವಣೆ 2023 ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ; ಯಾರಿಗೆ ಅನ್ವಯ ಇಲ್ಲ

ಬೆಂಗಳೂರು, ಮೇ 04; ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಮತದಾನಕ್ಕೆ 7 ದಿನ ಬಾಕಿ ಇದೆ. ಮೇ 10ರ ಬುಧವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಮತದಾನದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ. ಈ ಕುರಿತು ಕರ್ನಾಟಕ ಸರ್ಕಾರ ಎರಡು ಅಧಿಸೂಚನೆ ಪ್ರಕಟಿಸಲಾಗಿದೆ.
ಮೇ 2ರ ಮಂಗಳವಾರಕರ್ನಾಟಕರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ-1, ಸಿಆಸು ಇಲಾಖೆ (ರಾಜ್ಯ ಶಿಷ್ಟಾಚಾರ) ಅಪೇಕ್ಞಾ ಸತೀಶ್ ಪವಾರ್ ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ. ಆದರೆ ಈ ಸಾರ್ವತ್ರಿಕ ರಜೆ ಹಲವರಿಗೆ ಅನ್ವಯವಾಗುವುದಿಲ್ಲ.

ಕರ್ನಾಟಕ ಚುನಾವಣೆ; ಅಂಚೆ ಮತದಾನಕ್ಕಾಗಿ ವೇತನ ಸಹಿತ ರಜೆ
ಅಧಿಸೂಚನೆಯಲ್ಲಿ ದಿನಾಂಕ 10/05/2023ರ ಬುಧವಾರದಂದುಕರ್ನಾಟಕ ವಿಧಾನಸಭಾ ಚುನಾವಣೆಯು ನಡೆಯಲಿದ್ದು, ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಸರ್ಕಾರವು ಆಯಾ ಚುನಾವಣಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುವ ದಿನದಂದು ಸಾರ್ವತ್ರಿಕ ರಜೆಯನ್ನು ಸರ್ಕಾರವು ಘೋಷಿಸಿದೆ ಎಂದು ಹೇಳಿದೆ.

ಪತಿಯ ಪಾರ್ಥಿವ ಶರೀರದ ಮುಂದೆಯೇ ಮತದಾನ ಮಾಡಿದ ಮಹಿಳೆ!
ಆದರೆ ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿಗಳು/ ಸಿಬ್ಬಂದಿ ಮತ್ತು ಸೇವಾ ಮತದಾರರು ಮೇ 2 ರಿಂದ 4ರ ತನಕ ಅಂಚೆ ಮತದಾನ ಮಾಡಲು ಈಗಾಗಲೇ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.

ಮತದಾರರಲ್ಲದವರನ್ನೂ ಸೇರಿ ಮೇ 10 ರಂದು ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ: ಮಹತ್ವದ ಮಾಹಿತಿ 10/5/2023ರಂದು ಕ್ಷೇತ್ರಗಳಲ್ಲಿ ಮತದಾನವು ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ ಮತದಾನ ನಡೆಯುವ ಮತಗಟ್ಟೆಯನ್ನು ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದಲ್ಲಿ ಅಂತಹ ಕಛೇರಿ ಹಾಗೂ ಶಾಲೆಗಳಿಗೆ ದಿನಾಂಕ 09/05/2023ರ ಮಂಗಳವಾರದಂದು (ಪೂರ್ವ ತಯಾರಿಗಾಗಿ) ಹಾಗೂ ಮತ ಎಣಿಕೆ ನಡೆಯುವ ದಿನಾಂಕ 13/05/2023ರಂದು ಮತ ಎಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬಂಧಪಟ್ಟ ಚುನಾವಣಾಧಿಕಾರಿಗಳು ಕ್ರಮ ತೆಗೆದುಕೊಳ್ಳತಕ್ಕದ್ದು ಎಂದು ಅಧಿಸೂಚನೆ ತಿಳಿಸಿದೆ.
ಸಾರ್ವತ್ರಿಕ ರಜೆ ಅಧಿಸೂಚನೆ 2 ಸಾರ್ವತ್ರಿಕ ರಜೆಯ ಕುರಿತು ಅಪೇಕ್ಞಾ ಸತೀಶ್ ಪವಾರ್ ಹೊರಡಿಸಿರುವ 2ನೇ ಅಧಿಸೂಚನೆಯಲ್ಲಿ ಭಾರತ ಸರ್ಕಾರದ ಒಳಾಡಳಿತ ವ್ಯವಹಾರಗಳ ಇಲಾಖೆಯ (3029-1), ದಿನಾಂಕ 15/06/1957ರ ಅಧಿಸೂಚನೆಯಲ್ಲಿ ಪ್ರಸ್ತಾಪಿಸಲಾಗಿರುವ ನಗೋಷಿಯೇಬಲ್ ಇನ್‌ಸ್ಪುಮೆಂಟ್ ಆಕ್ಟ್-1881 (1881ರ ಅಧಿನಿಯಮ ಸಂಖ್ಯೆ 26)ರ 25ನೇ ಸೆಕ್ಷನ್‌ನಲ್ಲಿರುವ ವಿವರಣೆಯಂತೆ ವಿವರಣೆ ನೀಡಲಾಗಿದೆ.

ದಿನಾಂಕ 10/05/2023ರ ಬುಧವಾರದಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯುವ ಪ್ರಯುಕ್ತ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳು, ಮಹಾನಗರಗಳ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಕೃತ ಬ್ಯಾಂಕುಗಳು, ಇತರ ಬ್ಯಾಂಕುಗಳು ಮುಂತಾದ ಕಛೇರಿಗಳಿಗೆ ಸೀಮಿತಗೊಳಿಸಿ ಸರ್ಕಾರವು ಸಾರ್ವಜನಿಕ ರಜೆಯನ್ನು ಘೋಷಿಸಿದೆ.
ಹಾಗೆಯೇ, ಯಾವುದೇ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು (Industrial undertaking) ಅಥವಾ ಇನ್ನಿತರ ಸಾರ್ವಜನಿಕ ಸಂಸ್ಥೆ (Establishment)ಗಳಲ್ಲಿ ಖಾಯಂ ಮತ್ತು ದಿನಗೂಲಿ (Casual Work) ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರು ಮತದಾನ ದಿನಾಂಕದಂದು ವೇತನ ಸಹಿತ ರಜೆಗೆ ಅರ್ಹರಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. 12ಡಿ ಅಡಿ ಅರ್ಜಿ ಪಡೆದಿದ್ದ 80 ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನ ಮತದಾರರು ಏಪ್ರಿಲ್ 29, 30 ಮತ್ತು ಮೇ 1ರಂದು ಮನೆಯಲ್ಲಿಯೇ ಮತದಾನ ಮಾಡಿದ್ದಾರೆ. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ/ ಸಿಬ್ಬಂದಿಗಳು ಮೇ 2 ರಿಂದ 4 ರ ತನಕ ಅಂಚೆ ಮತದಾನ ಮಾಡಲಿದ್ದಾರೆ.

Related News

spot_img

Revenue Alerts

spot_img

News

spot_img