22.6 C
Bengaluru
Saturday, July 27, 2024

ಮಕ್ಕಳ ಸುರಕ್ಷತೆಗೆ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ!

ಬೆಂಗಳೂರು: ಶಾಲಾ ವಾಹನಗಳ ಚಾಲಕರಿಗೆ ಪೊಲೀಸ್‌ ವೆರಿಫಿಕೇಷನ್‌ ಕಡ್ಡಾಯಗೊಳಿಸಲಾಗಿದೆ. ಕಡ್ಡಾಯವಾಗಿ ವೆರಿಫಿಕೇಷನ್‌ ಮಾಡಿಸುವಂತೆ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಬಸ್‌, ಕ್ಯಾಬ್ ತರಹದ ಶಾಲಾ ವಾಹನಗಳು ಇದ್ದರೆ, ಕಡ್ಡಾಯವಾಗಿ ಮಹಿಳಾ ಸಹಾಯಕರನ್ನೇ ನೇಮಿಸುವಂತೆ ಆದೇಶಿಸಿದೆ. ಮಕ್ಕಳನ್ನು ಮನೆಯಿಂದ ಶಾಲೆಗೆ ಬಿಟ್ಟ ಬಳಿಕ ಮತ್ತೆ ಅವರನ್ನು ಮನೆಗೆ ಸುರಕ್ಷಿತವಾಗಿ ಬಿಟ್ಟುಬರುವುದಕ್ಕೆ ಸಹಾಯಕಿಯರ ಅಗತ್ಯವಿದೆ. ಹಾಗಾಗಿ ಈ ನಿಯಮವನ್ನು ಎಲ್ಲ ಶಾಲೆಗಳು ಪಾಲಿಸಬೇಕು, ಅಲ್ಲದೆ, ಆಯಾ ಬಿಇಓ(BEO) ಶಾಲೆಗಳಿಗೆ ಭೇಟಿ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.ಶಾಲಾ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ರಾಜ್ಯ ಶಾಲಾ ಶಿಕ್ಷಣ ಇಲಾಖೆಯು ಈ ನಿಯಮ ಜಾರಿಗೆ ತಂದಿದೆ.ಕರ್ನಾಟಕ ಮೊಟಾರು ವಾಹನಗಳ ನಿಯಮಗಳು 1989ಕ್ಕೆ ತಿದ್ದುಪಡಿ ತಂದು Conditions for vehicles engaged in transport of school children Rules 2012, ಖಾಸಗಿ ಒಪ್ಪಂದ ವಾಹನಗಳಲ್ಲಿ ಶಾಲಾ ಮಕ್ಕಳಿಗೆ ಸಾರಿಗೆ ಸೌಲಭ್ಯ ಒದಗಿಸುವ ಸಲುವಾಗಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.

*ನೇಮಕಕ್ಕೂ ಮೊದಲು ಎಲ್ಲಾ ಚಾಲಕರ ಮತ್ತು ಸಹಾಯಕರ ಹಿನ್ನೆಲೆಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ.

*ಪ್ರತಿ ಖಾಸಗಿ ಶಾಲಾ ವಾಹನಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಲು ಆದೇಶಿದ್ದು, ನಿಗದಿತ ಸಂಖ್ಯೆಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗದಂತೆ ಚಾಲಕರಿಗೆ ಸೂಚನೆ ನೀಡಲಾಗಿದೆ.

*ಚಾಲಕರ ಮತ್ತು ಸಹಾಯಕರಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗಳಿಂದ ಪಡೆದ ನಡವಳಿಕೆ ಪ್ರಮಾಣ ಪತ್ರವನ್ನು ಆಯಾ ಶಾಲೆಯ SATS ನಲ್ಲಿ ತಂತ್ರಾಂಶದಲ್ಲಿ Upload ಮಾಡುವುದು.

*ಖಾಸಗಿ ಶಾಲಾ ವಾಹನಗಳಲ್ಲಿ, ಬಸ್, ವ್ಯಾನ್, ಶಾಲಾ ಮಕ್ಕಳನ್ನು ಮನೆಯಿಂದ ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆತರುವ ಕೆಲಸವನ್ನು ನಿರ್ವಹಿಸಲು ಸಹಾಯಕರಾಗಿ ಮಹಿಳಾ ಸಹಾಯಕರನ್ನು ನೇಮಿಸಿಕೊಳ್ಳಬೇಕು.

* ಶಾಲಾ ವಾಹನಗಳಲ್ಲಿ ಕೆಲಸ ನಿರ್ವಹಿಸುವ ಚಾಲಕರು ಮತ್ತು ಸಹಾಯಕರು ಪ್ರತಿದಿನ ಕೆಲಸ ಪ್ರಾರಂಭದ ಮೊದಲು ಮತ್ತು ಎಲ್ಲಾ ಮಕ್ಕಳನ್ನು ಮನೆಗೆ ಬಿಟ್ಟನಂತರ ಶಾಲೆಗೆ ಬಂದು ಹಾಜರಾತಿ ಪುಸ್ತಕದಲ್ಲಿ ಶಾಲಾ ಮುಖ್ಯಸ್ಥರ ಸಮ್ಮುಖದಲ್ಲಿ ಕಡ್ಡಾಯವಾಗಿ ಸಹಿ ಮಾಡುವುದು

* ಸದರಿ ಮಾಹಿತಿಗಳನ್ನು ಪ್ರತಿ ವರ್ಷ ಆಯಾ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಿ ಅನುಮೋದನೆಯನ್ನು ಪಡೆಯುವುದು.

Related News

spot_img

Revenue Alerts

spot_img

News

spot_img