20.8 C
Bengaluru
Saturday, July 27, 2024

ಚುನಾವಣ ಕರ್ತವ್ಯ: ಒಂದೂವರೆ ಲಕ್ಷ ಮಂದಿ ಪೊಲೀಸ್ ಸಿಬ್ಬಂದಿ ನಿಯೋಜನೆ

ಬೆಂಗಳೂರು ಮೇ9;ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಸೋಮವಾರವೇ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು ಮಂಗಳವಾರ ಮನೆ ಮನೆ ಪ್ರಚಾರ ನಡೆಯಲಿದೆ. ಬುಧವಾರ ಅಂದ್ರೆ ಮೇ 10ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಚುಣಾವಣಾ ಅಧಿಕಾರಿಗಳು ಸಹ ವೋಟಿಂಗ್​​ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ರಾಜ್ಯಾದ್ಯಂತ ಮತದಾನಕ್ಕೆ ಒಟ್ಟು 1.56 ಲಕ್ಷ ಪೊಲೀಸರು ಬಿಗಿ ಭದ್ರತೆಗೆ ನಿಯೋಜಿತರಾಗಿದ್ದಾರೆ.ಹೈವೋಲ್ಟೇಜ್ ಪ್ರಚಾರದ ನಂತರ ಇದೀಗ ಕರ್ನಾಟಕದಲ್ಲಿ ಮತಯಂತ್ರಗಳ ಮೆಗಾ ಕದನಕ್ಕೆ ಕಾಲ ಕೂಡಿಬಂದಿದ್ದು, ನಾಳೆ 224 ಸದಸ್ಯ ಬಲದ ವಿಧಾನಸಭೆಗೆ ರಾಜ್ಯ ತನ್ನ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸಜ್ಜಾಗಿದೆ.

ರಾಜ್ಯದ 224 ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ 2 ಸಾವಿರದ 615 ಅಭ್ಯರ್ಥಿಗಳು ಕಣದಲ್ಲಿದ್ದಾರೆ,ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 11,631 ಸೂಕ್ಷ್ಮ ಮತಗಟ್ಟೆಗಳ ಸ್ಥಾಪಿಸಲಾಗಿದ್ದು, 617 ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 75,603 ಬ್ಯಾಲೆಟ್ ಯೂನಿಟ್ ಗಳಿದ್ದು, 70,300 ಕಂಟ್ರೋಲ್ ಯೂನಿಟ್‌ಗಳಿವೆ. 76,202 ವಿವಿ ಪ್ಯಾಟ್ ಯೂನಿಟ್‌ಗಳಿವೆ.ಮತದಾನ ದಿನದಂದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ಮತ್ತು ಚುನಾವಣಾ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ 700 ಕ್ಕೂ ಹೆಚ್ಚು ವಿಚಕ್ಷಣಾ ದಳಗಳನ್ನು ನೇಮಿಸಲಾಗಿದೆ. ಗಡಿ ಭಾಗದಲ್ಲಿ ಸುಮಾರು 700 ಕ್ಕೂ ಹೆಚ್ಚು ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಕಳೆದ 6 ತಿಂಗಳಿನಿಂದ ಜಾರಿ ಆಗದೆ ಇರುವ 5500 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿ ಮಾಡಲಾಗಿದೆ.ರಾಜ್ಯಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ‌. 304 ಡಿವೈಎಸ್ ಪಿ, 991 ಪಿಐ, 2610 ಪಿಎಸ್ ಐ, 5803 ಎಎಸ್ ಐ, 46,421 ಎಚ್ ಸಿ/ ಪಿಸಿ, 27,990 ಹೋಂ ಗಾರ್ಡ್ ಸೇರಿದಂತೆ 84,119 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ‌.

ಒಂದು ಮೊಬೈಲ್ ಸೆಕ್ಟರ್ 20 ಮತಗಟ್ಟೆಗಳನ್ನು ಕವರ್ ಮಾಡಲಿದೆ. ಮೊಬೈಲ್ ಸೆಕ್ಟರ್ ಗಳ ಮೇಲ್ವಿಚಾರಣೆಗೆ 749 ಸೂಪರ್‌ ವೈಸರ್ ಗಳು ನಿಯೋಜನೆ ಮಾಡಲಾಗಿದೆ. 700 ಫೈಯಿಂಗ್ ಸ್ಕ್ವಾಡ್, 700 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ. ಬಿಎಎಸ್ ಎಫ್ 108, ಸಿಐಎಸ್ಎಫ್ 75, ಐಟಿಬಿಪಿ 70, ಆರ್ ಪಿಎಫ್-35, ಎಸ್ಎಸ್ ಬಿ 75 ಹಾಗೂ ರಾಜ್ಯದ 224 ಕೆಎಸ್ಆರ್ ಪಿ ತುಕಡಿಗಳು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ನಿಯೋಜನೆಗೊಂಡ ಸಿಬ್ಬಂದಿ, 58, 282 ಮತಗಟ್ಟೆಗಳ ಬಳಿ ನಿಯೋಜಿಸಲಾಗಿದೆ. ಇನ್ನು 11,617 ಸೂಕ್ಷ್ಮ ಮತಗಟ್ಟೆಗಳ ಬಳಿ ಸಿಆರ್ ಪಿಎಫ್ ಹಾಗೂ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ. ವಿಶೇಷವಾಗಿ 2930 ಪೊಲೀಸ್ ಮೊಬೈಲ್ ಸೆಕ್ಟರ್ ಗಳ ಕಾರ್ಯಾಚರಣೆ ನಡೆಸಲಿದ್ದಾರೆ.

 

Related News

spot_img

Revenue Alerts

spot_img

News

spot_img