Revenue Facts

ಶಿಕ್ಷಣ ಕ್ಷೇತ್ರಕ್ಕೆ ಮಹತ್ವ ಕೊಟ್ಟ ಕೇಂದ್ರ ಬಜೆಟ್‌ : ವಿದ್ಯಾರ್ಥಿಗಳು ಓದುವ ಸಂಸ್ಕೃತಿಗೆ ಒತ್ತು

ಬೆಂಗಳೂರು, ಫೆ. 01 : ಸಂಸತ್‌ ನಲ್ಲಿ ಇಂದು ಮಂಡಿಸಿದ ಬಜೆಟ್‌ ನಲ್ಲಿ ವಿತ್ತ ಸಚಿವೆ ನಿರ್ಲಾ ಸೀತಾರಾಮನ್‌ ಅವರು ಶಿಕ್ಷಣಕ್ಕೆ ಒತ್ತು ನೀಡಿದ್ದಾರೆ. ಈ ಬಾರಿಯ ಬಜೆಟ್‌ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮಹತ್ವ ನೀಡಲಾಗಿದೆ. ಕೋವಿಡ್-‌19 ನಿಂದ ಶಿಕ್ಷಣ ಕ್ಷೇತ್ರ ಚೇತರಿಸಿಕೊಳ್ಳಲು ಬಜೆಟ್‌ ನಲ್ಲಿ ವಿಶೇಷ ನೆರವು ನೀಡಲಾಗಿದೆ. ಮಕ್ಕಳು ಮತ್ತು ಹದಿಹರೆಯದವರಿಗಾಗಿ ರಾಷ್ಟ್ರೀಯ ಡಿಜಿಟಲ್‌ ಲೈಬ್ರರಿ ಯೋಜನೆಯನ್ನು ಸ್ಥಾಪಿಸಲು ಮುಂದಾಗಿದೆ. ಈ ಮೂಲಕ ಮಕ್ಕಳು ಮತ್ತು ಹದಿಹರೆಯದವರಿಗೆ ಎಲ್ಲಾ ವಿಷಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಅನುಕೂಲವಂತೆ ಗುಣಮಟ್ಟದ ಪುಸ್ತಕಗಳಿಗೆ ಒತ್ತು ನೀಡಿದೆ.

ಈ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲು ಮತ್ತು ನ್ಯಾಷನಲ್ ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾ ಸಂಪನ್ಮೂಲಗಳನ್ನು ಪಡೆದುಕೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಮೂಲಸೌಕರ್ಯವನ್ನು ಒದಗಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಲಾಗುವುದು. ಈ ಗ್ರಂಥಾಲಯಗಳಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಶೀರ್ಷಿಕೆಗಳನ್ನು ಮರುಹೊಂದಿಸಲು NBT, CBT ಅನ್ನು ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದಂತಾಗಿದೆ. ಓದುವ ಸಂಸ್ಕೃತಿಯನ್ನು ಉತ್ತೇಜಿಸಲು ಮತ್ತು ಸಾಂಕ್ರಾಮಿಕ ಸಮಯದ ಕಲಿಕೆಯ ನಷ್ಟವನ್ನು ಸರಿದೂಗಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನು 157 ಹೊಸ ನರ್ಸಿಂಗ್ ಕಾಲೇಜು ಗಳ ಸ್ಥಾಪನೆ ಮಾಡುವುದಾಗಿ ಘೊಷಿಸಲಾಗಿದೆ. ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರ ಕ್ಕೂ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. 2014 ರಿಂದ ಸ್ಥಾಪಿತವಾಗಿರುವ ಅಸ್ತಿತ್ವದಲ್ಲಿರುವ 157 ವೈದ್ಯಕೀಯ ಕಾಲೇಜುಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು.

ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಶುಭ ಸುದ್ದಿ ನೀಡಿರುವ ವಿತ್ತ ಸಚಿವೆ, ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 8,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ಕೇಂದ್ರ ಸರ್ಕಾರ ನೇಮಿಸಿಕೊಳ್ಳಲಿದೆ ಎಂದು ಹೇಳಿದರು. ದುರ್ಬಲ ಬುಡಕಟ್ಟು ಗುಂಪುಗಳಿಗೆ ಪ್ರಮುಖ ಯೋಜನೆಗಳನ್ನು ಘೋಷಿಸಿದರು. 3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ 740 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಇನ್ನೂ ಮೂರು ವರ್ಷಗಳಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. ಮುಂದಿನ 3 ವರ್ಷಗಳಲ್ಲಿ 3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳ ಅಡಿಯಲ್ಲಿ 740 ಶಾಲೆಗಳಿಗೆ ಕೇಂದ್ರವು 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ.

Exit mobile version