ಮೈಸೂರು;ಕಳೆದ ವಿಧಾನಸಭೆ ಚುನಾವಣೆಯ ವೇಳೆ ವರುಣಾ ಕ್ಷೇತ್ರದಲ್ಲಿ, ಸಿದ್ದರಾಮಯ್ಯ ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿದ್ದರು ಎಂದು ಯತೀಂದ್ರ ಸಿದ್ದರಾಮಯ್ಯನವರ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.ನಂಜನಗೂಡಿನ ಬಹಿರಂಗ ಸಭೆಯಲ್ಲಿ ಮಾತನಾಡಿ ಯತೀಂದ್ರ, ಮಡಿವಾಳ ಸಮುದಾಯದ ಕುಕ್ಕರ್, ಐರನ್ ಬಾಕ್ಸ್ ವಿತರಣೆ ಮಾಡಿದ್ದೆವು ಎಂದಿದ್ದಾರೆ. ಯತೀಂದ್ರ ಬಾಯಿ ತಪ್ಪಿ ಮಾತನಾಡಿದ ಈ ಮಾತು ಸಿದ್ದರಾಮಯ್ಯ ಚುನಾವಣಾ ಅಕ್ರಮಕ್ಕೆ ಸಾಕ್ಷಿ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರ ಮೇಲೆ ಈ ಬಗ್ಗೆ ಇರುವ ಆರೋಪಕ್ಕೆ ಇದು ಮತ್ತಷ್ಟು ಪುಷ್ಟಿ ನೀಡಿದಂತೆ ಆಗಿದೆ.ನಂಜನಗೂಡಿನಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಡಿವಾಳರ ಸಮುದಾಯ ಭವನದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ನೀಡಿರುವ ಹೇಳಿಕೆಯು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಹರಡಿದೆ.ಪ್ರತಿಪಕ್ಷ ಬಿಜೆಪಿ ಈ ಸಂಬಂಧ ಕಾನೂನು ಹೋರಾಟಕ್ಕೆ ಸಜ್ಜಾಗುತ್ತಿದೆ. ಚುನಾವಣಾ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆಂದು ದೂರು ಕೊಡಲು ಬಿಜೆಪಿ ನಿರ್ಧಾರ ಮಾಡಿದೆ. ಇನ್ನು ಗ್ಯಾರಂಟಿ ಕೂಪನ್ ಹಂಚಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವನ್ನು (Congress Government) ವಜಾ ಮಾಡುವಂತೆ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಆಗ್ರಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲೀಗ ಗಿಫ್ಟ್ ಪಾಲಿಟಿಕ್ಸ್ (Gift Politics) ಸಾಕಷ್ಟು ಸದ್ದು ಮಾಡುತ್ತಿದೆ.ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ನಿಜವೇ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ. ಇಂತಹ ಸೂಕ್ಷ್ಮ ವಿಚಾರಗಳನ್ನು ಚುನಾವಣಾ ಆಯೋಗ ಗಮನಿಸಬೇಕಾಗುತ್ತದೆ ಅಂತಾ ಬೊಮ್ಮಾಯಿ ಹೇಳಿದ್ದಾರೆ.