Revenue Facts

ಹೊಸ ಬಿಪಿಎಲ್ ಕಾರ್ಡ್ ಗಳ ವಿತರಣೆ: ಸಚಿವ ಕೆಎಚ್‌ ಮುನಿಯಪ್ಪ

ಹೊಸ ಬಿಪಿಎಲ್ ಕಾರ್ಡ್ ಗಳ ವಿತರಣೆ: ಸಚಿವ  ಕೆಎಚ್‌ ಮುನಿಯಪ್ಪ

ಬೆಂಗಳೂರು,ಜು 27;ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್‌ಗಳ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.ಈ ಕುರಿತು ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಅವರು, ‘ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಕಾರ್ಡ್‌ಗಳನ್ನು ಆದಷ್ಟು ಬೇಗ ನೀಡುವ ಪ್ರಕ್ರಿಯೆಯನ್ನು ಸರ್ಕಾರ ನಡೆಸಲಿದೆ. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.ಈಗಾಗಲೇ ಹೊಸದಾಗಿ ಬಿಪಿಎಲ್ ಕಾರ್ಡ್ ಕೋರಿ 3 ಲಕ್ಷ ಅರ್ಜಿಗಳು ಬಂದಿವೆ. ಕೇವಲ ಆರೋಗ್ಯ ಸೇವೆ ಸೌಲಭ್ಯದ ಸಲುವಾಗಿ ಬಿಪಿಎಲ್ ಕಾರ್ಡ್ ಬಯಸಿರುವ ಅರ್ಹ ಅರ್ಜಿದಾರರಿಗೆ ಬಿಪಿಎಲ್ ‘ಹೆಲ್ತ್’ ಕಾರ್ಡ್ ಶೀಘ್ರವೇ ವಿತರಣೆಯಾಗಲಿದೆ. ಈ ಕಾರ್ಡ್ ಆರೋಗ್ಯ ಸೌಲಭ್ಯಕ್ಕೆ ಮಾತ್ರ ಸೀಮಿತವಾಗಿರಲಿದ್ದು, ಪಡಿತರ ಪಡೆಯಲು ಅವಕಾಶ ಇರುವುದಿಲ್ಲ.ಬಿಪಿಎಲ್ ಪಡಿತರ ಚೀಟಿ ಯೋಜನೆಗಳ ಲಾಭ ಪಡೆಯಲು ಕಡ್ಡಾಯ,ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.64ರಷ್ಟು ಜನರು ಪಡಿತರ ವ್ಯವಸ್ಥೆ ವ್ಯಾಪ್ತಿಗೆ ಒಳಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿ, 84 ಲಕ್ಷ ಬಿಪಿಎಲ್ ಕಾರ್ಡ್​ಗಳಿಗೆ ಪಡಿತರ ಸೀಮಿತಗೊಳಿಸಿದೆ. ಉಳಿದ 14 ಲಕ್ಷ ಬಿಪಿಎಲ್ ಪಡಿತರ ಚೀಟಿದಾರರಿಗೆ ವಿತರಿಸುವ ಅಕ್ಕಿಯ ಮೊತ್ತವನ್ನು ರಾಜ್ಯ ಸರ್ಕಾರ ಭರಿಸುತ್ತಿದ್ದು, ಹೊಸ ಅರ್ಜಿದಾರರ ಬಿಪಿಎಲ್ ಪಡಿತರ ಚೀಟಿ ವಿತರಣೆ ಸವಾಲಾಗಿದೆ.

Exit mobile version