26.7 C
Bengaluru
Sunday, December 22, 2024

ಪಿಎಂಎವೈ ಯೋಜನೆ ಅಡಿ ಮನೆಗಳ ನಿರ್ಮಾಣದ ಗುರಿ ಎಷ್ಟು ಗೊತ್ತಾ..?

ಬೆಂಗಳೂರು, ಜು. 21 : ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ವಸತಿ ಇಲ್ಲದ ಬಡವರಿಗೆ ಮನೆಯನ್ನು ನಿರ್ಮಿಸಿ ಕೊಡುವುದೇ ಕೇಂದ್ರ ಸರ್ಕಾರದ ಉದ್ದೇಶ. ಈಗಾಗಲೇ ಈ ಯೋಜನೆ ಅಡಿಯಲ್ಲಿ ಹಲವು ಕಡೆ ಮನೆಗಳನ್ನು ನಿರ್ಮಾಣ ಮಾಡಿ ಫಲಾನುಭವಿಗಳಿಗೆ ವಿತರಣೆಯನ್ನೂ ಮಾಡಲಾಗಿದೆ. ಇನ್ನಷ್ಟು ಮನೆಗಳು ನಿರ್ಮಾಣವಾಗುತ್ತಿದೆ. ಇನ್ನು 2024 ರ ಅಂತ್ಯದ ವೇಳೆಗೆ ಒಂದು ಕೋಟಿಗೂ ಹೆಚ್ಚು ಮನೆಗಳನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಈ ಬಗ್ಗೆ ಲೋಕಸಭೆಗೆ ಲಿಖಿತ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಮಾಹಿತಿಯನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮುಂದಿನ ವರ್ಷದ ಅಂತ್ಯದ ವೇಳೆಗೆ ಒಂದು ಕೋಟಿಗೂ ಅಧಿಕ ಮನೆಗಳನ್ನು ನಿರ್ಮಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಈ ತಿಂಗಳ 10 ರವರೆಗೂ ದೇಶದಲ್ಲಿ 118 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 1,12,22,000 ಮನೆಗಳ ನಿರ್ಮಾಣಕ್ಕೆ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ.

ಒಟ್ಟು 75,31,000 ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸಲಾಗಿದೆ. ಈ ಆರ್ಥಿಕ ವರ್ಷದಲ್ಲಿ ಪ್ರಧಾನ ಮಂತ್ರಿ ಆವಾಜ್ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣಕ್ಕೆ 28 ಸಾವಿರ ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಇತ್ತೀಚೆಗಷ್ಟೇ ಗುಜರಾತ್ ನಲ್ಲಿ 19,000 ಮನೆಗಳನ್ನು ವಿತರಣೆ ಮಾಡಲಾಯ್ತು. 3 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. 2022ರ ಡಿಸೆಂಬರ್ ತಿಂಗಳಲ್ಲಿ ತ್ರಿಪುರಾದಲ್ಲಿ 2 ಲಕ್ಷ ಮನೆಗಳು, 2022ರ ಅಕ್ಟೋಬರ್ ತಿಂಗಳಲ್ಲಿ ಮಧ್ಯ ಪ್ರದೇಶ ಸಾತ್ನಾದಲ್ಲಿ 4.51 ಲಕ್ಷ ಮನೆಗಳು, 2022ರ ನವೆಂಬರ್ ತಿಂಗಳಲ್ಲಿ ದೆಹಲಿ ಸ್ಲಂ ನಿವಾಸಿಗಳಿಗೆ 3024 ಫ್ಲ್ಯಾಟ್ಗಳನ್ನು ಪಿಎಂ ವಿತರಿಸಿದ್ದಾರೆ.

2022ರ ಸೆಪ್ಟೆಂಬರ್ ತಿಂಗಳಲ್ಲಿ ಗುಜರಾತ್ ನಲ್ಲಿ 45,000 ಮನೆಗಳು, 2022ರ ಮಾರ್ಚ್ ನಲ್ಲಿ ಮಧ್ಯ ಪ್ರದೇಶದಲ್ಲಿ 5 ಲಕ್ಷ ಮನೆಗಳು 2021ರ ಅಕ್ಟೋಬರ್ ತಿಂಗಳಲ್ಲಿ ಉತ್ತರ ಪ್ರದೇಶದ 75 ಜಿಲ್ಲೆಗಳಲ್ಲಿ 75,000 ಮನೆಗಳು, 2020ರ ಸೆಪ್ಟೆಂಬರ್ ತಿಂಗಳಲ್ಲಿ ಮಧ್ಯಪ್ರದೇಶದಲ್ಲಿ 1.75 ಲಕ್ಷ ಮನೆಗಳನ್ನು ಪ್ರಧಾನ ಮಂತ್ರಿ ಆವಾಜ್ ಯೋಜೆನೆಯ ಅಡಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಿ ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ. ಕರ್ನಾಟಕ ರಾಜ್ಯಕ್ಕೆ 2015ರಿಂದ 7,06,320 ಮನೆಗಳನ್ನು ಮಂಜೂರು ಮಾಡಲಾಗಿದೆ.

Related News

spot_img

Revenue Alerts

spot_img

News

spot_img